ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ 205 ಕೆರೆಗಳ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸುವ ಸಂಬಂಧ ನೀತಿ ರೂಪಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ.
ನಗರದಲ್ಲಿನ ಕೆರೆಗಳ ನಿರ್ವಹಣೆಯಲ್ಲಿ ಬಿಡಿಎ, ಬಿಬಿಎಂಪಿ ಜಲಮಂಡಳಿ ಸಂಸ್ಥೆಗಳು ವಿಫಲವಾದ ಹಿನ್ನಲೆಯಲ್ಲಿ ಇಂತಹದ್ದೊಂದು ನಿರ್ಧಾರ ತೆಗೆದುಕೊಂಡಿರುವುದು ಗಮನಾರ್ಹ ಅಂಶವಾಗಿದೆ.
ಸಿಟಿಜನ್ ಆ್ಯಕ್ಷನ್ ಗ್ರೂಪ್ ಇನ್ನಿತರರು ನಗರದಲ್ಲಿಒತ್ತುವರಿಯಾಗಿರುವ ರಾಜಕಾಲುವೆ, ಕೆರೆ ಜಾಗಗಳ ಒತ್ತುವರಿ ತೆರವುಗೊಳಿಸಲು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಿಜೆ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದವು.
ರಾಜಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದ ವಿಚಾರಣೆ ವೇಳೆ ಕೆರೆಗಳ ನಿರ್ವಹಣೆಯನ್ನು ಖಾಸಗಿ ಸಂಘ, ಸಂಸ್ಥೆಗಳಿಗೆ ವಹಿಸುವ ವಿಚಾರ ಸರಕಾರ ಬಹಿರಂಗಪಡಿಸಿದೆ. ಆ ಮೂಲಕ ಖಾಸಗಿ ಸಂಘ ಸಂಸ್ಥೆಗಳು ಇನ್ಮುಂದೆ ಬೆಂಗಳೂರಿನ ಕೆರೆಗಳ ನಿರ್ವಹಣಾ ಪಾಲುದಾರರಾಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA