ಚೀನಾ: ಚೀನಾದ ನೈಋತ್ಯ ಪರ್ವತದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ಯುನ್ನಾನ್ ಪ್ರಾಂತ್ಯದಲ್ಲಿ 47 ಜನರು ಸಾವನ್ನಪ್ಪಿದ್ದಾರೆ.
ಭೂಕುಸಿತಕ್ಕೆ ನಿಖರವಾದ ಕಾರಣವನ್ನು ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭೂಕುಸಿತದಲ್ಲಿ ಸುಮಾರು 18 ಕ್ಕೂ ಹೆಚ್ಚು ಮನೆಗಳು ಕುಸಿದಿದೆ. 200 ಕ್ಕೂ ಹೆಚ್ಚು ಜನರನ್ನು ಘಟನಾ ಪ್ರದೇಶದಿಂದ ಸ್ಥಳಾಂತರಿಸಲಾಗಿದೆ. 200 ಕ್ಕೂ ಹೆಚ್ಚು ರಕ್ಷಣಾ ಕಾರ್ಯಕರ್ತರು ,33 ಅಗ್ನಿಶಾಮಕ ವಾಹನಗಳು ಹಾಗೂ ಅಧಿಕಾರಿಗಳು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಭೂಕುಸಿತದಲ್ಲಿ ಕಾಣೆಯಾದ ಜನರನ್ನು ಹುಡುಕಲು 10 ಲೋಡಿಂಗ್ ಯಂತ್ರಗಳನ್ನು ಸಜ್ಜುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.