ಛತ್ತೀಸ್ ಗಢ: ಛತ್ತೀಸ್ ಗಡದಲ್ಲಿ ಮೊಬೈಲ್ ಬಳಕೆಗೆ ಅಡ್ಡಿಯಾಗಿದ್ದನೆಂದು ಸ್ವತಃ ಅಣ್ಣನನ್ನೇ ತಂಗಿಯೊಬ್ಬಳು ಹೊಡೆದು ಕೊಂದ ಘಟನೆ ನಡೆದಿದೆ.
14ವರ್ಷದ ಬಾಲಕಿಯೊಬ್ಬಳು ಆಗಾಗ ಮೊಬೈಲ್ ನಲ್ಲಿ ಯಾರೋ ಹುಡುಗನ ಜೊತೆ ಮಾತನಾಡುತ್ತಿದ್ದು, ಇದನ್ನು ಗಮನಿಸಿದ ಆಕೆಯ ಅಣ್ಣ(18) ಇನ್ನು ಮುಂದೆ ಮೊಬೈಲ್ ಬಳಸದಂತೆ ಎಚ್ಚರಿಕೆ ನೀಡಿ ಮೊಬೈಲ್ ಕಿತ್ತುಕೊಂಡಿದ್ದ.
ಇದರಿಂದ ಕುಪಿತಳಾದ ಬಾಲಕಿ ತಾಯಿ ಮನೆಯಲ್ಲಿಲ್ಲದ ವೇಳೆ ಕೊಡಲಿಯಿಂದ ಮಲಗಿದ್ದ ಅಣ್ಣನ ಕುತ್ತಿಗೆಗೆ ಬೀಸಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಘಟನೆ ಬಳಿಕ ಸ್ನಾನ ಮಾಡಿದ ಬಾಲಕಿ ತನ್ನ ಬಟ್ಟೆ ಮೇಲಿದ್ದ ರಕ್ತದ ಕಲೆಯನ್ನು ಸ್ವಚ್ಛ ಮಾಡಿದ್ದಳು. ಇದಾದ ಬಳಿಕ ತನ್ನ ಅಣ್ಣನನ್ನು ಯಾರೋ ಕೊಲೆ ಮಾಡಿದ್ದಾರೆಂದು ಬಾಲಕಿ ನೆರೆಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಲಕಿಯನ್ನು ವಿಚಾರಣೆ ನಡೆಸಿದಾಗ ತಾನೇ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296