ಗಾಜಾ: ಗಾಜಾದ ಆಸ್ಪತ್ರೆ ಯೊಂದರಲ್ಲಿ 200ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿವೆ. ಇಸ್ರೇಲ್ ಆರು ತಿಂಗಳಿಗಿಂತ ಹೆಚ್ಚು ಕಾಲ ಗಾಜಾದ ಮೇಲೆ ನಿರಂತರ ದಾಳಿ ನಡೆಸಿತ್ತು.
ಏಪ್ರಿಲ್ 7ರಂದು ಇಸ್ರೇಲಿ ಮಿಲಿಟರಿ ತನ್ನ ಸೇನೆಯನ್ನು ಹಿಂಪಡೆದಿದೆ. ಇದಾದ ಬಳಿಕ ಎಲ್ಲೆಡೆ ರಕ್ಷಣಾ ಸಿಬ್ಬಂದಿಗಳು ಜನರನ್ನು ಹುಡುಕುವ ಪ್ರಯತ್ನವನ್ನು ಮುಂದುವರೆಸಿದ್ದು, ಆಗ ಮಕ್ಕಳು, ಯುವಕರು, ಮಹಿಳೆಯರು ಸೇರಿದಂತೆ 180ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿವೆ.
ಇಸ್ರೇಲಿ ಪಡೆಗಳು ಅಲ್-ಶಿಫಾ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದವು. ಈ ಆಸ್ಪತ್ರೆಯ ಕೆಳಗೆ ಸುರಂಗಗಳಲ್ಲಿ ಹಮಾಸ್ ಕಮಾಂಡ್ ಸೆಂಟರ್ ಇತ್ತು. ಇದೀಗ ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದೆ. ಮೊದಲು ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು. ಬಳಿಕ ಇಸ್ರೇಲ್ ಕೂಡ ಇರಾನ್ ಮೇಲೆ ದಾಳಿ ನಡೆಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296