ಬೆಂಗಳೂರು: ಕಳೆದ 20 ವರ್ಷಗಳಿಂದ ಮನೆಗಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಕಳ್ಳನನ್ನು ಸಿಸಿಬಿ ಸಂಘಟಿತ ಅಪರಾಧ ದಳ ಸೆರೆ ಹಿಡಿದಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಕಾಶ್ ಅಲಿಯಾಸ್ ಬಾಲಾಜಿ (44) ಬಂಧಿತ ಎಂದು ಗುರುತಿಸಲಾಗಿದ್ದು, ನಿವೃತ್ತ ಹೆಡ್ ಕಾನ್ಸ್ಟೇಬಲ್ ಒಬ್ಬರ ಮಗಳನ್ನೇ ಪ್ರೀತಿಸಿ ಮದುವೆಯಾಗಿದ್ದ ಈತ ಹಿಂದೆಗೂ ಜೈಲುವಾಸ ಅನುಭವಿಸಿದ್ದ ಎನ್ನಲಾಗಿದೆ.
ಇತ್ತೀಚೆಗೆ ಬಂಡೆಪಾಳ್ಯ ವ್ಯಾಪ್ತಿಯ ಮನೆಯೊಂದರಲ್ಲಿ ನಕಲಿ ಕೀ ಬಳಸಿ ಚಿನ್ನಾಭರಣ ದೋಚಿದ್ದ ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾವಣೆಯಾಗಿತ್ತು. ಹಲವು ಆಯಾಮಗಳಲ್ಲಿ ತನಿಖೆ ನಡೆಸಿದಾಗ ರಾಜಧಾನಿಯ ಮೋಸ್ಟ್ ವಾಂಟೆಡ್ ಮನೆಗಳ್ಳ ಪ್ರಕಾಶನ ಕೈವಾಡವಿರುವುದು ಗೊತ್ತಾಗಿತ್ತು. ಹೀಗಾಗಿ, ತಲೆಮರೆಸಿಕೊಂಡಿದ್ದ ಪ್ರಕಾಶನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನಗರದಲ್ಲಿ ಆರು ಮನೆಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿ ದೋಚಿದ್ದ 27 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದೂವರೆ ತಿಂಗಳ ಹಿಂದೆ ಜೈಲಿಂದ ಬಿಡುಗಡೆಯಾಗಿದ್ದ ಪ್ರಕಾಧಿಶ್, ಆರು ಮನೆ ದೋಚುವಲ್ಲಿ ಸಫಲನಾಗಿದ್ದ. ಕದ್ದ ಆಭರಣಗಳನ್ನು ಅಡವಿಟ್ಟು ಮೋಜು ಮಸ್ತಿ, ದುಶ್ಚಟಗಳಿಗೆ ಖರ್ಚು ಮಾಡುತ್ತಿದ್ದ. ಜೈಲಿನಲ್ಲಿ ನಕಲಿ ಕೀ ತಯಾರಿಕೆ ಬಗ್ಗೆ ಕಲಿತಿದ್ದಾಗಿ ಆರೋಪಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296