ತುಮಕೂರು: ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಕಾರು ನಡುರಸ್ತೆಯಲ್ಲಿ ಧಗ ಧಗನೇ ಹೊತ್ತಿ ಉರಿದು ಭಸ್ಮವಾಗಿದೆ. ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಗುಬ್ಬಿ ತಾಲೂಕಿನ ಹೊಸಪಾಳ್ಯ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ.
ಗುಬ್ಬಿಯಿಂದ ತುಮಕೂರು ಕಡೆಗೆ ಹೊರಟಿದ್ದ ಹೋಂಡಾ ಐಕಾನ್ ಕಾರು ಚಲಿಸುತ್ತಿದ್ದಾಗಲೇ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕೆನ್ನಾಲಿಗೆ ಕಾರು ಸಂಪೂರ್ಣ ಭಸ್ಮವಾಗಿದ್ದು ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಅದರು.
ಘಟನೆಯಿಂದ ಯಾವುದೇ ಸಾವು, ನೋವು ಸಂಬವಿಸಿಲ್ಲ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


