nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    • ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    ಜಿಲ್ಲಾ ಸುದ್ದಿ September 2, 2026

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    By Ganesh TumkuruSeptember 2, 2026No Comments2 Mins Read
    grama panchayat

    ಹೊಳೆನರಸೀಪುರ / ಹಳ್ಳಿಮೈಸೂರು:  ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಪಂಚಾಯತಿ ಆವರಣದಲ್ಲಿ ಇತ್ತೀಚೆಗೆ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಪಟೇಲ್ ಅಧ್ಯಕ್ಷತೆಯಲ್ಲಿ ನಡೆದ ‘ಜನಸ್ಪಂದನ’ ಸಭೆಯು ಕೇವಲ ಕಾಗದದ ಮೇಲಿನಾಚೆಗೆ ಸಾರ್ವಜನಿಕರಿಗೆ ಯಾವುದೇ ಸ್ಪಷ್ಟ ನ್ಯಾಯ ದೊರಕಿಸಿಕೊಡುವಲ್ಲಿ ವಿಫಲವಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಭೆಯಲ್ಲಿ ಸಂಸದರ ಸಮ್ಮುಖದಲ್ಲೇ ಅಧಿಕಾರಿಗಳು ನೀಡಿದ ಭರವಸೆಗಳು ಕೇವಲ ನೀರ ಮೇಲಿನ ಗುಳ್ಳೆಯಾಗಿ ಮಾರ್ಪಟ್ಟಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಹೊಳೆನರಸೀಪುರದ ಖಾದಿ ಮತ್ತು ಗ್ರಾಮೋದ್ಯೋಗ ಸಹಕಾರ ಸಂಘದ ‘ಇ ಸ್ವತ್ತು’ ದಾಖಲೆಗೆ ಸಂಬಂಧಿಸಿದಂತೆ ಸಂಘದ ಕಾರ್ಯದರ್ಶಿ ಅಕ್ಷಯ್ ಕುಮಾರ್ ಅವರು ಕಳೆದ 6 ತಿಂಗಳುಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ದರೂ, ಹಳ್ಳಿಮೈಸೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ಯಾವುದೇ ಹಿಂಬರಹ ನೀಡಿರಲಿಲ್ಲ.

    ಜನಸ್ಪಂದನ ಸಭೆಯಲ್ಲಿ ಈ ಬಗ್ಗೆ ಪ್ರಶ್ನಿಸಿದಾಗ, ಪಿಡಿಒ ಅವರು “ಇದು ಖಾದಿ ಸಂಸ್ಥೆಯ ಜಾಗವೇ ಅಲ್ಲ” ಎಂದು ವಾದಿಸಿ, ತಾವೇ ಈಗಾಗಲೇ ಹಿಂಬರಹ ನೀಡಿರುವುದಾಗಿ ಸಭೆಯನ್ನು ದಾರಿ ತಪ್ಪಿಸುವ ಯತ್ನ ಮಾಡಿದರು. ಆದರೆ ಅಂತಹ ಯಾವುದೇ ಅಧಿಕೃತ ದಾಖಲೆ ಖಾದಿ ಸಂಸ್ಥೆಗೆ ತಲುಪಿರಲಿಲ್ಲ.

    ಸಂಸದರ ನಿರ್ದೇಶನದಂತೆ ಕಾರ್ಯದರ್ಶಿ ಅಕ್ಷಯ್ ಕುಮಾರ್ ಹಾಗೂ ಮಾಹಿತಿ ಹಕ್ಕು ಹೋರಾಟಗಾರ ಮುತ್ತುರಾಜ್ ಅವರು ಮರುದಿನ ಬೆಳಗ್ಗೆ 11:00 ಗಂಟೆಗೆ ತಾಲೂಕು ಪಂಚಾಯತಿ ಕಚೇರಿಗೆ ತೆರಳಿ ಕಾರ್ಯನಿರ್ವಾಹಕ ಅಧಿಕಾರಿಯನ್ನು (EO) ಭೇಟಿ ಮಾಡಿದರು.

    ಇಒ ಅವರು ಸಂಜೆ 3:10 ರವರೆಗೆ ಸಾರ್ವಜನಿಕರನ್ನು ಕಾಯಿಸಿ, ಕೊನೆಗೆ ಕೇವಲ ತಾಂತ್ರಿಕ ದೋಷದ ಕಾರಣವೊಡ್ಡಿ ಪಿಡಿಒ ಅವರ ಹಳೆಯ ಹಿಂಬರಹದ ಪ್ರತಿಯನ್ನೇ ನೀಡಿದರು.

    ಈ ಕುರಿತು ನ್ಯಾಯಾಲಯದಲ್ಲಿ ವಾದ ಮಂಡಿಸುವ ಬಗ್ಗೆ ಅಥವಾ ಹೊಸ ಅರ್ಜಿ ಸಲ್ಲಿಸುವ ಬಗ್ಗೆ ಪ್ರಶ್ನಿಸಿದ ಇಒ, ಏಕವಚನದಲ್ಲಿ ಸಂಸದರ ಹೆಸರನ್ನೆತ್ತಿ ವ್ಯಂಗ್ಯವಾಡಿ, “ನಾನು ನಿನಗೆ ಪಿಎ ಅಲ್ಲ, ಸಂಸದರ ಮುಂದೆ ತುಂಬಾ ಮಾತನಾಡುತ್ತಿದ್ದೆಯಲ್ಲ, ಅದಕ್ಕೆ ನಿನಗೆ ಈ ಸ್ಥಿತಿ ಬಂದಿದೆ” ಎಂದು ಮಾನಸಿಕವಾಗಿ ನಿಂದಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

    ಸಂಸದರ ಆದೇಶಕ್ಕೂ ಬೆಲೆಯಿಲ್ಲವೇ?

    ಕ್ಷೇತ್ರದ ಸಂಸದರಾದ ಶ್ರೇಯಸ್ ಪಟೇಲ್ ಅವರಂತಹ ಜನಪ್ರತಿನಿಧಿಗಳು ಸಾರ್ವಜನಿಕರ ಕುಂದುಕೊರತೆ ನಿವಾರಿಸಲು ನಡೆಸುವ ಅಧಿಕೃತ ಸಭೆಗಳಿಗೇ ಕೆಳಹಂತದ ಅಧಿಕಾರಿಗಳು ಈ ಮಟ್ಟದ ಕ್ಯಾರೆ ಎನ್ನದಿರುವುದು ವ್ಯವಸ್ಥೆಯ ದೋಷಕ್ಕೆ ಹಿಡಿದ ಕನ್ನಡಿಯಾಗಿದೆ. ಸಂಸದರ ಎದುರು ಒಂದು ಮಾತು, ಮರುದಿನ ಸಾರ್ವಜನಿಕರಿಗೆ ಕಿರುಕುಳ ನೀಡುವ ಇಒ ಹಾಗೂ ಪಿಡಿಒ ಅವರ ಬೇಜವಾಬ್ದಾರಿ ಧೋರಣೆಯ ವಿರುದ್ಧ ಉನ್ನತಾಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಕಾರ್ಯದರ್ಶಿ ಹಾಗೂ ಸಾರ್ವಜನಿಕರು ತೀವ್ರವಾಗಿ ಆಗ್ರಹಿಸಿದ್ದಾರೆ.

    ವರದಿ: ಮಂಜುಶ್ರವಣೂರು, ಹೊಳೆನರಸೀಪುರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ

    September 7, 2026

    ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ

    September 5, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಕೊರಟಗೆರೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಗೌತಮ ಬುದ್ಧ ಹಾಗೂ ವಿಶ್ವಗುರು ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ…

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.