ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳಿಂದಾಗಿ ಅಪಘಾತಗಳ ಸಂಖ್ಯೆ ಹಂತಹಂತವಾಗಿ ಇಳಿಮುಖವಾಗುತ್ತಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಟ್ವಿಟ್ ಮಾಡಿದ್ದಾರೆ.
ಜುಲೈ ತಿಂಗಳಲ್ಲಿ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತಗಳಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಮೇ ತಿಂಗಳಲ್ಲಿ 29 ಮತ್ತು ಜೂನ್ ನಲ್ಲಿ 28 ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಸಂಖ್ಯೆಯನ್ನು ಮತ್ತಷ್ಟು ತಗ್ಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾದ ಒಂದು ತಿಂಗಳ ಅಂತರದಲ್ಲಿ ಎಡಿಜಿಪಿ ಎರಡು ಸಲ ಹೆದ್ದಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ, ಅಪಘಾತಗಳ ಸಂಖ್ಯೆ ಸಾವು ಹಾಗೂ ಗಾಯಾಳುಗಳ ಸಂಖ್ಯೆ ಸ್ವಲ್ಪಮಟ್ಟಿಗೆ ತಗ್ಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


