ತುಮಕೂರು: ಡಿಸೆಂಬರ್ 1 ವಿಶ್ವ ಏಡ್ಸ್ ದಿನಾಚರಣೆಯ ಪ್ರಯುಕ್ತ ಮಧುಗಿರಿಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ವಿಶ್ವ ಏಡ್ಸ್ ದಿನ — 2025 ಜಾಗೃತಿ ಹಾಗೂ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವೆಂಕಟಪ್ಪ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಮಧುಗಿರಿ ಇವರು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸದೃಢ ದೇಶ ನಿರ್ಮಾಣಕ್ಕೆ ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ.ಮೋಹನ್ ಕುಮಾರ್ ರವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಹೆಚ್ ಐವಿ ಸೋಂಕು ಹರಡುವ ವಿಧಾನ, ಚಿಕಿತ್ಸೆ ಮತ್ತು ಸೊಂಕಿತರಿಗಿರುವ ಸವಲತ್ತುಗಳ ಬಗ್ಗೆ ತಿಳಿಸಿದರು. ಹಾಗೂ ವಿವಾಹ ಪೂರ್ವ ಬ್ರಹ್ಮಚರ್ಯ ಪಾಲನೆ ಮಾಡುವುದರಿಂದ ಸೋಂಕನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಆನಂದ್, ಅಖಿಲ್ ಆಪ್ತ ಸಮಾಲೋಚಕರಾದ ಸುಮಾಮಣಿ, ರಾಧಾಕೃಷ್ಣ, ಧರಣೇಶ್ ಗೌಡ, ಮೋಹನ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಶ್ರೀ ರಾಘವೇಂದ್ರ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


