ಇಸ್ಲಾಮಿಕ್ ರಾಷ್ಟವಾದ ಸೌದಿ ಅರೇಬಿಯಾದಲ್ಲಿ ಮೊಟ್ಟ ಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಗೆ ಭಾಗವಹಿಸಲು ಅವಕಾಶ ನೀಡಿದೆ. ರೂಮಿ ಅಲ್ ಕಹ್ತಾನಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಮೊದಲ ಸೌದಿ ಯುವತಿ ಎಂಬ ಇತಿಹಾಸ ಸೃಷ್ಟಿಸಲಿದ್ದಾರೆ.
ಸೌಂದರ್ಯ ಸ್ಪರ್ಧೆಯ ಹೆಸರುಗಳಿಸಿರುವ ರೂಮಿ ಅಲ್ಕಹ್ತಾನಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ಸುದ್ದಿಯನ್ನು ಪ್ರಕಟಿಸಿದ್ದು, ಅವರು ವಿಶ್ವದ ಅತ್ಯಂತ ಜನಪ್ರಿಯ ಸ್ಪರ್ಧೆಗಳಲ್ಲಿ ಇಸ್ಲಾಮಿಕ್ ರಾಷ್ಟವನ್ನು ಪ್ರತಿನಿಧಿಸಲಿದ್ದಾರೆ.
ಅವರು ತಮ್ಮ ಮನಮೋಹಕ ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಮ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಮಾಡೆಲ್ ಸ್ಟ್ರಾಪ್ಲೆಸ್ ಸೀಕ್ವಿನ್ಡ್ ಗೌನ್ ಧರಿಸಿರುವುದನ್ನು ಕಾಣಬಹುದು. ಫೋಟೋಗಳ ಜೊತೆಗೆ, “ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾಗವಹಿಸಲು ನನಗೆ ಅಭಿಮಾನವಿದೆ ಎಂದು ಅವರು ತಿಳಿಸಿದ್ದಾರೆ.. ಇದು ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾದ ಮೊದಲ ಭಾಗವಹಿಸುವಿಕೆ” ಎಂದು ಬರೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296