ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚುತ್ತಿದೆ. ಚುನಾವಣೆಯ ಭಾಗವಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಆದರೆ, ಇಲ್ಲಿ ವಿರೋಧ ಪಕ್ಷಗಳು ಮಂಜುನಾಥ್ ಅವರ ವಿರುದ್ಧ ಆಟ ಕಟ್ಟಿದ್ದು, ಸಿಎನ್ ಮಂಜುನಾಥ್ ಹೆಸರಿನ ವಿವಿಧ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಂಜುನಾಥ್ ಅವರು, ಇವು ಬಹಳ ಹಳೆಯ ತಂತ್ರಗಳು. ನನ್ನ ಸ್ಪರ್ಧೆಯಿಂದ ಕೆಲವರು ಭಯಭೀತರಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು, ಕಾಂಗ್ರೆಸ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಜನ ಬುದ್ಧಿವಂತರು, ವಿದ್ಯಾವಂತರು ಮತ್ತು ಚಿಂತನಶೀಲರಾಗಿದ್ದು. ನಾನು ರಾಷ್ಟ್ರೀಯ ಪಕ್ಷ ಬಿಜೆಪಿಯಿಂದ ಕಮಲದ ಚಿಹ್ನೆಯ ಮೇಲೆ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂಬುದು ಜನರಿಗೆ ತಿಳಿದಿದೆ ಎಂದು ಮಂಜುನಾಥ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296