ವ್ಯಕ್ತಿಯೊಬ್ಬರು ತಮ್ಮ ನೆಚ್ಚಿನ ಪಕ್ಷದ ಬಗ್ಗೆ ವಿಚಿತ್ರ ಅಭಿಮಾನ ತೋರುವ ಮೂಲಕ ಇದೀಗ ಭಾರೀ ಸುದ್ದಿಯಾಗಿದ್ದಾರೆ. ಆಂಧ್ರಪ್ರದೇಶದ ಕಾಕಿನಾಡ ನಿವಾಸಿಯೊಬ್ಬರ ಮದುವೆ ಕಾರ್ಡ್‌ನಲ್ಲಿ ಜನಸೇನಾ ಪಕ್ಷದ ಪ್ರಣಾಳಿಕೆಯನ್ನು ಮುದ್ರಿಸಲಾಗಿದೆ.
ವ್ಯಕ್ತಿ ಪಕ್ಷದ ನಾಯಕ ಪವನ್ ಕಲ್ಯಾಣ್ ಬೆಂಬಲಿಗರಾಗಿದ್ದು, ಪಿಠಾಪುರಂನಲ್ಲಿ ಪವನ್ ಕಲ್ಯಾಣ್ ಗೆ ಮತ ನೀಡುವಂತೆ ಆಹ್ವಾನಿತರನ್ನು ಒತ್ತಾಯಿಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವ್ಯಕ್ತಿ ಜನರಿಗೆ ಮದುವೆ ಕಾರ್ಡ್‌ಗಳನ್ನು ವಿತರಿಸುತ್ತಿರುವುದನ್ನು ಕಾಣಬಹುದಾಗಿದೆ.
ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಜನಸೇನಾ ಪಕ್ಷವನ್ನೂ ಕಟ್ಟಿದ್ದಾರೆ ಎಂಬುದು ಗಮನಾರ್ಹ. ಇತ್ತೀಚಿನ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಎನ್ ಡಿಎ ಮೈತ್ರಿಕೂಟದ ಭಾಗವಾಗಿತ್ತು. ಪಕ್ಷವು ಮುಂಬರುವ ಲೋಕಸಭಾ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ-ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


