ತುಮಕೂರು: ರಸ್ತೆ ಕಾಮಗಾರಿಗೆ ಪೂರ್ವ ನಿಯೋಜಿತವಾಗಿ ಸುರಕ್ಷತೆ ಕೈಗೊಳ್ಳದ ಕಾರಣ, ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿರುವ ಘಟನೆ ತುಮಕೂರು ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೈರೇನಹಳ್ಳಿಯಲ್ಲಿ ಹಾದು ಗೌರಿಬಿದನೂರು ಕೊರಟಗೆರೆ ಹೋಗುವ ರಾಜ್ಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ಮನೆಯೊಳಗೆ ಹರಿದ ಚರಂಡಿ ನೀರಿನಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಮನೆಯೊಳಗಿದ್ದ ಅಪಾರ ಪ್ರಮಾಣ ಧವಸ ಧಾನ್ಯ, ದಿನಬಳಕೆ ವಸ್ತುಗಳು ನೀರು ಪಾಲಾಗಿದೆ. ಹೆದ್ದಾರಿ ಎತ್ತರ ಹೆಚ್ಚಿಸಿ, ಚರಂಡಿ ಕಾಮಗಾರಿ ಪೂರ್ಣಗೊಳಿಸದೇ ಇರೋದೆ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಸ್ಥಳಕ್ಕೆ ಕೊರಟಗೆರೆ ತಹಸೀಲ್ದಾರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸ್ಥಳದಲ್ಲಿ ರಸ್ತೆ ಕುಸಿತದಿಂದ ಸಿಎನ್ ಜಿ ವಾಹನ ಪಲ್ಟಿಯಾಗಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296