ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿ ಎಂದು ಹಲವು ಕಡೆ ಹೋಮ ಹವನ ಜರುಗುತ್ತಿತ್ತು. ಜನರು ತಮ್ಮದೇ ಆದ ರೀತಿಯಲ್ಲಿ ಬೇಡಿಕೊಳ್ಳುತ್ತಿದ್ದರು. ಆದರೆ ಇಲ್ಲೊಬ್ಬ ಉತ್ತರಕನ್ನಡದ ವಯಸ್ಸಾದ ವ್ಯಕ್ತಿ ಉರುಳು ಸೇವೆ ಹರಕೆ ಹೊತ್ತಿದ್ದರು!
ಇಲ್ಲೊಬ್ಬ ವ್ಯಕ್ತಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕೆ ಅಭಿಮಾನಿಯೊಬ್ಬರು ಉರುಳುಸೇವೆ ಮಾಡಿ ಹರಕೆ ತೀರಿಸಿದ ಅಪರೂಪದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಲ್ಲಿ ನಡೆದಿದೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹರಿಹರ ಭಟ್ ಅವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಹರಕೆ ಹೊತ್ತಿದ್ದರು. ಅಂಕೋಲಾ ತಾಲ್ಲೂಕಿನ ಹಳವಳ್ಳಿ ಗ್ರಾಮದ ನಿವಾಸಿ ಹರಿಹರ ಭಟ್ ಅವರು ಉರುಳು ಸೇವೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರ ಮೇಲೆ ತಮ್ಮಗಿರುವ ಅಭಿಮಾನವನ್ನು ತೋರ್ಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


