ಕೋಲಾರ: ಕೋಲಾರ ತಾಲೂಕಿನ ನಾಗನಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದ್ದು, ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್ ಗೌಡ (26) ಮೃತ ದುರ್ದೈವಿಯಾಗಿದ್ದಾರೆ.
ಗೌತಮ್ ತನ್ನ ಕುಟುಂಬದವರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದು, ಗೌತಮ್ ಕೃಷಿ ಹೊಂಡಕ್ಕೆ ಜಿಗಿದು ಈಜುತ್ತಿದ್ದ. ಈ ವೇಳೆ ನೀರಿನಲ್ಲಿ ಉಸಿರುಗಟ್ಟಿ ಪ್ರಾಣಬಿಟ್ಟಿದ್ದಾನೆ. ಸರಿಯಾಗಿ ಈಜು ಬಾರದಿದ್ದರು ಈಜಲು ಹೋಗಿ ನೀರುಪಾಲಾಗಿದ್ದಾನೆ. ಸದ್ಯ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296