ಮತಗಟ್ಟೆಗೆ ಕೇಸರಿ ಶಾಲು ಧರಿಸಿ ಬಂದಿದ್ದ ಪಕ್ಷದ ಏಜೆಂಟ್ ಒಬ್ಬರನ್ನು ಪೊಲೀಸರು ವಾಪಸ್ ಕಳಿಸಿದ ಪ್ರಸಂಗ ಬೆಂಗಳೂರಿನ ಆರ್ ಆರ್ ನಗರದ ಮತಗಟ್ಟೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮತಗಟ್ಟೆಗೆ ಕೇಸರಿ ಶಾಲು ಧರಿಸಿ ಬಂದಿದ್ದ ವ್ಯಕ್ತಿಯನ್ನು, ಪರೋಕ್ಷವಾಗಿ ಪಕ್ಷದ ಪ್ರಚಾರ ಆಗಲಿದೆ ಎಂಬ ಕಾರಣಕ್ಕೆ ಪೊಲೀಸರು ವಾಪಸ್ ಕಳಿಸಿದರು. ಶಾಲು ತೆಗೆದಿಟ್ಟು ಬಂದ ನಂತರ ಮತಗಟ್ಟೆ ಒಳಗೆ ಬಿಡಲಾಯಿತು.
ಬೆಂಗಳೂರು ನಗರದಲ್ಲಿ ಎಂದಿನಂತೆ ನಿಧಾನಗತಿಯಲ್ಲಿ ಮತದಾನ ಮುಂದುವರಿದಿದೆ. ಆದರೆ ವಿಧಾನಸಭಾ ಚುನಾವಣೆಗಿಂತ ವೇಗವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಪ್ರಸ್ತುತ ಬೆಳಗ್ಗೆ 10 ಗಂಟೆವರೆಗೆ ಬೆಂಗಳೂರು ನಗರ ವ್ಯಾಪ್ತಿಯ ಮೂರೂ ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು ಶೇ. 8.5ರಷ್ಟು ಮತದಾನವಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸದಾನಂದ ಗೌಡ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ, ಕ್ರಿಕೆಟಿಗ ರಾಹುಲ್ ದ್ರಾವಿಡ್, ಚಿತ್ರನಟಿ ಅಮೂಲ್ಯ, ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಸಚಿವ ಜಮೀರ್ ಅಹ್ಮದ್ ಖಾನ್, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಪ್ರೊ ರಾಜೀವ್ ಗೌಡ ಸೇರಿದಂತೆ ಅನೇಕ ಗಣ್ಯರು ಮತದಾನ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296