ತುಮಕೂರು: ಮಧುಗಿರಿ ತಾಲ್ಲೂಕಿನ ಗುರುವಡೇರಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಮತದಾನ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಮತ ಚಲಾವಣೆ ಮಾಡಿದರು. ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಕೆ.ಎನ್.ರಾಜಣ್ಣ, ಮತಗಟ್ಟೆ ಸಂಖ್ಯೆ 148ರಲ್ಲಿ ಮತದಾನ ಮಾಡಿದರು.
ಪುತ್ರ ಎಂಎಲ್ಸಿ ರಾಜೇಂದ್ರ, ಪುತ್ರಿ ರಶ್ಮಿ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಇನ್ನೊಂದೆಡೆ ಗೃಹ ಸಚಿವ ಡಾ. ಪರಮೇಶ್ವರ್ ಪತ್ನಿ ಕನ್ನಿಕಾ ಸಮೇತ ಆಗಮಿಸಿ ತುಮಕೂರಿನ ಸಿದ್ದಾರ್ಥ ನಗರದಲ್ಲಿ ಮತದಾನ ಮಾಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸ್ಥಾಪಿಸಲಾಗಿರೋ ಮತಗಟ್ಟೆ ಸಂಖ್ಯೆ 57 ರಲ್ಲಿ ಮತದಾನ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296