ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೇವಲ 2 ವರ್ಷಗಳ ಕಾಲ ಮಾತ್ರ ಪ್ರಧಾನಿ ಆಗಿರುತ್ತಾರೆ. ಅವರ ಜಾತಕದಲ್ಲಿ 12 ವರ್ಷ ಪ್ರಧಾನಿ ಆಗುವ ಯೋಗ ಇರುವುದರಿಂದ ಇದು ಸಂಭವಿಸಲಿದೆ ಎಂದು ಬ್ರಹಾಂಡ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ನರೇಂದ್ರ ಮೋದಿಯವರು ದೇಶ ಕಂಡಂತಹ ಹೆಮ್ಮೆಯ ಪ್ರಧಾನಮಂತ್ರಿಯಾಗಿದ್ದಾರೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಇದೀಗ 2024ರ ತನಕ ಅಂದರೆ ಸುದೀರ್ಘ 10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದ ಸ್ಥಾನನಮಾನವನ್ನು ವಿಶ್ವಮಟ್ಟದಲ್ಲಿ ಎತ್ತರಕ್ಕೆ ಏರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಪಂಚದ ಪ್ರಭಾವಿ ಪ್ರಧಾನಿಗಳ, ನಾಯಕರ ಪಟ್ಟಿಯಲ್ಲಿ ನರೇಂದ್ರ ಮೋದಿಯವರೇ ಮೊದಲಿಗರು. ಅವರ ವರ್ಚಸ್ಸು, ಮಾತು, ಆಡಳಿತ ವೈಖರಿ ಯಾರಿಗೂ ಬರಲಾರದೇನೋ. ಒಟ್ಟಿನಲ್ಲಿ ಸದ್ಯಕ್ಕೆ ಅವರಿಗೆ ಪರ್ಯಾಯವಾಗಿ ಯಾವುದೇ ವ್ಯಕ್ತಿ ಇಲ್ಲ ಎಂದೆನಿಸುತ್ತದೆ.
ಈ ಸಲದ ಲೋಕಸಭಾ ಚುನಾವಣೆಯಲ್ಲೂ NDA ಮೈತ್ರಿ ಕೂಟ ಭರ್ಜರಿ ಗೆಲವು ಸಾಧಿಸಿ, ಮೋದಿ ಮತ್ತೊಮ್ಮೆ ಪ್ರಧಾನಿ ಆಗಿ ಹ್ಯಾಟ್ರಿಕ್ ಭಾರಿಸಲಿದ್ದಾರೆ ಎಂದು ಸಮೀಕ್ಷೆಗಳು ತಿಳಿಸಿವೆ. ಅಂತೆಯೇ ಬಿಜೆಪಿ ಕೂಡ ಮೋದಿಯೇ ಮುಂದೆ 10 ವರ್ಷಗಳ ಕಾಲ ದೇಶದ ಪ್ರಧಾನಿ ಆಗಲಿದ್ದಾರೆ ಎಂದು ಹೇಳಿದೆ. ಈ ನಡುವೆ ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದು ಮೋದಿ ಮುಂದೆ ಬರೀ 2 ವರ್ಷ ಮಾತ್ರ ಪ್ರಧಾನಿ ಆಗಲಿದ್ದಾರೆ ಎಂದು ಹೇಳಿದ್ದಾರೆ.
ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ ಗುರೂಜಿ ಮೋದಿ ಅವರ ಜಾತಕದಲ್ಲಿ 12 ವರ್ಷಗಳ ಕಾಲ ಪ್ರಧಾನಿ ಆಗುವ ಯೋಗ ಇದೆ. ಈಗಾಗಲೇ 10 ವರ್ಷ ಮುಗಿದಿದೆ. ಇನ್ನು ಎರಡು ವರ್ಷ ಮಾತ್ರ ಬಾಕಿ. ಹೀಗಾಗಿ ಮುಂದೆಯೂ ಅವರು ಪ್ರಧಾನಿ ಆಗಿ ಆಯ್ಕೆಯಾಗುತ್ತಾರೆ. ಆದರೆ ಎರಡು ವರ್ಷ ಮಾತ್ರ ಅಧಿಕಾರದಲ್ಲಿ ಇರುತ್ತಾರೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


