ಬೆಂಗಳೂರು: ಭಾರತೀಯ ಜೈನ್ ಮಿಲನ ಎಂಟರ ಜಿನ ಭಜನಾ ಸೀಸನ್–8 ರ ಫೈನಲ್ ಅಂಗವಾಗಿ ನೃತ್ಯ ಪ್ರದರ್ಶನ ದೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾಧಾ ಧರ್ಮಸ್ಥಳ ಸುರೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು .
ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಬೆಂಗಳೂರು ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ಹಾಗೂ ಶ್ರದ್ಧಾ ಅಮಿತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು .
ಈ ಸಂದರ್ಭದಲ್ಲಿ ಬೆಂಗಳೂರು ಜೈನ ಅಸೋಸಿಯೇಷನನ ನಿರ್ದೇಶಕರುಗಳು, ಜೈನ ಸಮಾಜದ ಮುಖಂಡರುಗಳು, ವಿವಿಧ ಜಿಲ್ಲಾ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ,ವಿವಿಧ ಮಹಿಳಾ ಸಂಘಟನೆಗಳು ಮುಖ್ಯಸ್ಥರುಗಳು, ಪದಾಧಿಕಾರಿಗಳು ಸೇರಿದಂತೆ ಶ್ರಾವಕ– ಶ್ರಾವಕಿಯರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಸ್ವಯಂ ಭೂ ಸ್ತೋತ್ರ ಪಠಣ ಮಾಡಲಾಯಿತು. ಟಿ.ವಿ. ನಿರೂಪಕಿ ನಮಿತಾ ಜೈನ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ತೀರ್ಪುಗಾರರು ಹಾಗೂ ಸಂಗೀತ ವಾಚಕರನ್ನ ಶಾಲುಹೊದಿಸಿ ಸನ್ಮಾನಿಸಲಾಯಿತು . ಸ್ವಯಂ ಭೂಸ್ತೋತ್ರದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೋನಿ ವರ್ಮ ತಂಡದಿಂದ ನೃತ್ಯ ರೂಪಕ ಪ್ರದರ್ಶಿಸಲಾಯಿತು.
ವರದಿ: ಜೆ.ರಂಗನಾಥ, ತುಮಕೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx