ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರ/ ಆಶ್ರಮ ಶಾಲೆಗಳ ನಿರ್ವಹಣೆ ಕುರಿತು ಪರಿಶೀಲಿಸಲು ಹಮ್ಮಿಕೊಂಡಿದ್ದ “ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಲಾಖಾಯುಕ್ತರು ಜಿಲ್ಲಾ/ ತಾಲ್ಲೂಕು ಮಟ್ಟದ ಇಲಾಖಾಧಿಕಾರಿ/ ಸಿಬ್ಬಂದಿ ಪ್ರತಿ ಮಾಹೆಯ 3ನೇ ಶನಿವಾರದಂದು ನಿಗದಿತ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಬೇಕೆಂದು ನೀಡಿದ್ದ ನಿರ್ದೇಶನದಂತೆ “ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಇಲಾಖೆಯಿಂದ ನಡೆಸಲಾಗುತ್ತಿರುವ ವಿದ್ಯಾರ್ಥಿನಿಲಯಗಳಿಗೆ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ/ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಭೇಟಿ ಸಂದರ್ಭದಲ್ಲಿ ಸಮಗ್ರ ತಪಾಸಣೆ ನಡೆಸಿ 126 ಅಂಶಗಳನ್ನೊಳಗೊಂಡ ತಪಾಸಣಾ ನಮೂನೆಯನ್ನು ಭರ್ತಿ ಮಾಡಿ ಸಮಗ್ರ ವರದಿಯನ್ನು ಆಯುಕ್ತಾಲಯಕ್ಕೆ ಸಲ್ಲಿಸಲಾಗಿದೆ.
“ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಹಿಂದುಳಿದ ವರ್ಗಗಳ ಇಲಾಖೆಯಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ಸ್ವಚ್ಛತೆ ಮತ್ತು ಇತರೆ ಮೂಲಭೂತ ಸೌಕರ್ಯ ಒದಗಿಸವ ಕಡೆಗೆ ಆದ್ಯತೆ ನೀಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q