ಅಕಾಲಿಕ ಮಳೆಯ ಪರಿಣಾಮ ಟೊಮೆಟೊ ಬೆಳೆಗೆ ಭಾರೀ ಹಾನಿಯಾಗಿದೆ. ಹೀಗಾಗಿ ಪೂರೈಕೆಯೂ ಕಮ್ಮಿಯಾಗಿದೆ. ಇದರಿಂದಾಗಿ ಕರ್ನಾಟಕ ಸಹಿತ ಅನೇಕ ರಾಜ್ಯಗಳಲ್ಲಿ ಟೊಮೆಟೋ ಬೆಲೆ ಏರಿಕೆಯಾಗಿದೆ.
ಕೆಲವು ರಾಜ್ಯಗಳಲ್ಲಿ ಕೆ.ಜಿ.ಗೆ 100 ರೂ. ವರೆಗೆ ಟೊಮೆಟೋ ಬೆಲೆ ಏರಿಕೆಯಾಗಿದೆ. ನಿರಂತರವಾಗಿ ಏರುತ್ತಿರುವ ಬೆಲೆಯನ್ನು ನಿಯಂತ್ರಿಸಲು ಸರ್ಕಾರವು ಟೊಮೆಟೋ ದರ ಕೆಜಿಗೆ 65 ರೂ.ಗೆ ಮಾರಾಟ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಅಕ್ಟೋಬರ್‌ನಲ್ಲಿ ಟೊಮೆಟೋ ಬೆಲೆ ಶೇ.39ರಷ್ಟು ಹೆಚ್ಚಾಗಿದೆ. ಕಳೆದ ತಿಂಗಳು ಕೆಜಿಗೆ ಸರಾಸರಿ 44 ರೂ.ನಿಂದ 62 ರೂ.ಗೆ ಏರಿಕೆಯಾಗಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಸಗಟು ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಕ್ವಿಂಟಲ್‌ಗೆ 3562 ರೂ.ನಿಂದ 5045 ರೂ.ಗೆ ಏರಿಕೆಯಾಗಿದೆ.
ಶೇ.11ರಷ್ಟು ತರಕಾರಿ ಥಾಲಿಯ ಬೆಲೆ ಏರಿಕೆಯಾಗಿದೆ. ಇದಕ್ಕೆ ಕಾರಣ ತರಕಾರಿಗಳ ಬೆಲೆ ಏರಿಕೆ. ಆದರೆ, ಮಾಂಸಾಹಾರಿ ಥಾಲಿಯ ದರ ಶೇ.2ರಷ್ಟು ಕಡಿಮೆಯಾಗಿದೆ. ಈ ಹಿಂದೆಯೂ ಟೊಮೆಟೋ ಬೆಲೆ ಹೆಚ್ಚಾದಾಗ ಸರ್ಕಾರ ಇದೇ ರೀತಿ ಮಾರಾಟ ಆರಂಭಿಸಿತ್ತು.
ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್ ಗಢದಲ್ಲೂ ಟೊಮೇಟೊ ಬೆಳೆ ಹಾನಿಯಾಗಿದೆ. ಮಳೆಯಿಂದಾಗಿ ಸಾರಿಗೆಯೂ ದುಬಾರಿಯಾಗಿದ್ದು, ಮಳೆಗಾಲದಲ್ಲಿ ತರಕಾರಿ ಬೆಲೆ ಏರಿಕೆಯಾಗಲು ಇದು ಪ್ರಮುಖ ಕಾರಣವಾಗಿದೆಯಂತೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296