ರಾಷ್ಟ್ರಪತಿ ದ್ರೌಪದಿ ಮುರ್ಮು ನೆನ್ನೆ ಹಿರಿಯ ರಾಜಕಾರಣಿ ಎಲ್.ಕೆ. ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರಶಸ್ತಿಯನ್ನು ನಿವಾಸದಲ್ಲೇ ಪ್ರದಾನ ಮಾಡಿದರು.
ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ. ನರಸಿಂಹ ರಾವ್, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೂ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು.
ಅನಾರೋಗ್ಯದ ಕಾರಣ ನಿನ್ನೆ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಆಗಮಿಸಿರಲಿಲ್ಲ ಎಂದು ವರದಿಯಾಗಿತ್ತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296