ನಿರ್ವಹಣೆ ಕೊರತೆಯಿಂದ ಕಳೆಗುಂದಿದ್ದ ಕಸ್ತೂರ ಬಾ ರಸ್ತೆಯಲ್ಲಿರುವ ವೆಂಕಟಪ್ಪ ಕಲಾ ಗ್ಯಾಲರಿ, ಮುಂದಿನ ಒಂಬತ್ತು ತಿಂಗಳಲ್ಲಿ ಆಧುನಿಕ ಸ್ಪರ್ಶದೊಂದಿಗೆ ಕಲಾ ಪ್ರಪಂಚಕ್ಕೆ ತೆರೆದುಕೊಳ್ಳಲಿದೆ. ‘ಸ್ಮಾರಕ ದತ್ತು’ ಯೋಜನೆಯಡಿ ಬ್ರಿಗೇಡ್ ಫೌಂಡೇಷನ್ ಈ ಕಟ್ಟಡದ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದೆ.
ಗ್ಯಾಲರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ನವೀಕರಣ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಿದರು.


