nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದ ಡೆಮಾಕ್ರಸಿ ಭದ್ರಗೊಳಿಸುವಲ್ಲಿ ಪತ್ರಕರ್ತರ ಪಾತ್ರ ಬಹುದೊಡ್ಡದು: ಜ್ಯೋತಿಗಣೇಶ್
    ತುಮಕೂರು January 16, 2025

    ದೇಶದ ಡೆಮಾಕ್ರಸಿ ಭದ್ರಗೊಳಿಸುವಲ್ಲಿ ಪತ್ರಕರ್ತರ ಪಾತ್ರ ಬಹುದೊಡ್ಡದು: ಜ್ಯೋತಿಗಣೇಶ್

    By adminJanuary 16, 2025No Comments2 Mins Read
    sammelana

    ತುಮಕೂರು: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗವೂ ಕೂಡ ನಾಲ್ಕನೇ ಅಂಗವಾಗಿ ಕಾರ್ಯ ನ್ಯಾಯ ಶಾಸನ ವಿಚಾರಗಳಲ್ಲಿ ಮಹತ್ತರವಾದ ಬದಲಾವಣೆ ತರುವಲ್ಲಿ ಬಹು ಮುಖ್ಯವಾಗಿರುವ ಪತ್ರಿಕಾರಂಗ ದೇಶದ ಡೆಮಾಕ್ರಸಿಯನ್ನು ಭದ್ರಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್‌ ಅವರು ತಿಳಿಸಿದರು.

    ಜನವರಿ 18 ಮತ್ತು 19 ರಂದು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಘಟಕ ಇವರ ಆತಿಥ್ಯದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ವೇದಿಕೆ ನಿರ್ಮಾಣ, ವಸ್ತು ಪ್ರದರ್ಶನ ಮಳಿಗೆ ನಿರ್ಮಾಣ ಸೇರಿದಂತೆ ಇತರೆ ಪೂರ್ವ ಸಿದ್ಧತಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಮ್ಮತುಮಕೂರಿನ ಜಿಲ್ಲಾಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರ ಮಾರ್ಗದರ್ಶನದಂತೆ ಶಿಕ್ಷಣ ಭೀಷ್ಮ ಡಾ.ಎಚ್‌.ಎಮ್‌.ಗಂಗಾಧರಯ್ಯ ನವರು ಕಟ್ಟಿ ಬೆಳೆಸಿದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ರಾಜ್ಯದ ಎಲ್ಲಾ ಪತ್ರಕರ್ತರು ಒಂದೆಡೆ ಸೇರಿ ಸಮ ಸಮಾಜದ ನಿರ್ಮಾಣಕ್ಕೆ ಪತ್ರಕರ್ತರು ನೀಡಿರುವ ಕೊಡುಗೆ ಎಂತಹದು ಎಂಬ ವಿಷಯವನ್ನು ಸಮಾಜಕ್ಕೆ ಪಸರಿಸಲಿದ್ದು, ದೃಢವಾದ ಪ್ರಜಾಪ್ರಭುತ್ವ ವ್ಯವಸ್ಥೆತಿದ್ದಲು ಪತ್ರಿಕಾರಂಗದ ತಮ್ಮ ಪಾತ್ರವನ್ನ ಇಂತಹ ಸಮ್ಮೇಳನಗಳಲ್ಲಿ ಚರ್ಚಿಸುವುದು ಶ್ಲಾಘನೀಯ ಎಂದು ತಿಳಿಸಿದರು.

    ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಎಸ್‌ ರವಿಪ್ರಕಾಶ್‌ಅವರು ಮಾತನಾಡಿ,  ಗೃಹ ಸಚಿವರು ಹಾಗೂ ಸಾಹೇ ವಿಶ್ವ ವಿದ್ಯಾಲಯದ ಕುಲಾಧಿಪತಿಗಳಾದ ಡಾ.ಜಿ.ಪರಮೇಶ್ವರ್‌ ಅವರ ಆಶಯದಂತೆ ನಮ್ಮಕಾಲೇಜು ಆವರಣದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ವಿಭಿನ್ನವಾಗಿ ಹತ್ತು ಹಲವು ವಿಶೇಷತೆಗಳಿಂದ ಕೂಡಿದೆ ರಾಜ್ಯಾದ್ಯಂತ ಸಮ್ಮೇಳನಕ್ಕೆ ಆಗಮಿಸುತ್ತಿರುವ ಪತ್ರಕರ್ತರ ಸಂಖ್ಯೆಯನ್ನು ಮೊದಲ ಬಾರಿಗೆ ಆನ್ಲೈನಲ್ಲಿ ನೋಂದಣಿ ಮಾಡಿರುವುದು ಡಿಜಿಟಲ್ ಮಾಧ್ಯಮಕ್ಕೆ ಹಿಡಿದ ಕೈಗನ್ನಡಿಯಂತಾಗಿದೆ ಇದನ್ನು ನೋಡಿದರೆ ತಿಳಿಯಲಿದೆ,  ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದು ಸಮ್ಮೇಳನದ ಭಾಗವಾಗಿ ನಡೆಯಲಿರುವ ವಿವಿಧ ಗೋಷ್ಠಿಗಳು ಮಹತ್ವದ್ದಾಗಿದ್ದು ಪ್ರಮುಖ ಸುದ್ದಿ ಸಂಸ್ಥೆಗಳಿಂದ ಆಗಮಿಸುವ ಮುಖ್ಯಸ್ಥರ ಗಮನ ಸೆಳೆಯಲಿದೆ. ಇಂತಹ ಮಹತ್ವದ ಸಮ್ಮೇಳನಗಳಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಪಾತ್ರವೂ ಬಹಳ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

    ಕಾನಿಪ ಜಿಲ್ಲಾಧ್ಯಕ್ಷ ಚೀನಿ ಪುರುಷೋತ್ತಮ್‌ ಅವರು ಮಾತನಾಡಿ, ಈಗಾಗಲೇ ತಿಳಿಸಿರುವಂತೆ ಜನವರಿ 18 ಮತ್ತು 19ರಂದು ಐತಿಹಾಸಿಕವಾದ ಬೃಹತ್ ಸಮ್ಮೇಳನಕ್ಕೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು 18ರ ಬೆಳಿಗ್ಗೆ 8 ಗಂಟೆಗೆ ಟೌನ್ ಹಾಲ್ ವೃತ್ತದಿಂದಎಸ್‌ ಎಸ್ ಐ ಟಿ ಮೈದಾನದವರೆಗೂ ನಡೆಯಲಿರುವ ವಿಶೇಷ ಪತ್ರಕರ್ತರ ಮೆರವಣಿಗೆ ಮತ್ತು ಟ್ಯಾಬ್ಲೋ ಪತ್ರಕರ್ತರ ಭಾಗವಹಿಸುವಿಕೆ ಜನಪ್ರತಿನಿಧಿಗಳ ಚಾಲನೆ ಜಿಲ್ಲೆಯ ವಿವಿಧ ಮಠಾಧೀಶರ ಸಾನಿಧ್ಯ ವಿಶೇಷವಾಗಿರುತ್ತದೆ ಎಂದು ತಿಳಿಸಿದರು.

    ಅಂದು ನಡೆಯುವ ವೇದಿಕೆ ಕಾರ್ಯಕ್ರಮ ಬಹಳ ವಿಶೇಷವಾಗಿದ್ದು,  ಮುಖ್ಯಮಂತ್ರಿಗಳು ಸಮ್ಮೇಳನ ಉದ್ಘಾಟನೆ ಮಾಡಲಿದ್ದು ಕೇಂದ್ರ ಮಂತ್ರಿ ವಿ.ಸೋಮಣ್ಣ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ.

    ನಂತರ ಪತ್ರಕರ್ತರಿಗಾಗಿ ವಿವಿಧ ಗೋಷ್ಠಿಗಳು ನಡೆಯಲಿದ್ದು, ಇಂದು ಸಂಜೆ ನಡೆಯಲಿರುವ ಖ್ಯಾತ ಗಾಯಕಿ ಶಮಿತಾ ಮಲ್ನಾಡ್‌ ಅವರ ಸಂಗೀತ ಸಂಜೆ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಲಿದೆ. ಈ ರೀತಿಯಾಗಿ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ಎರಡನೇ ದಿನವು ಮುಂದುವರೆಯಲಿದ್ದು ವಿವಿಧ ಗೋಷ್ಠಿಗಳು ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರಕಣ್ಣಿಗೆ ಮುದ ನೀಡಲಿದ್ದು,  ಸಮಾರೋಪ ಸಮಾರಂಭದಲ್ಲಿ ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್ .ಡಿ.ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್, ಬಿ.ವೈ.ರಾಘವೇಂದ್ರ ಸೇರಿದಂತೆ ವಿವಿಧ ಪ್ರಮುಖರು ರಾಜಕಾರಣಿಗಳು ಭಾಗಿಯಾಗಲಿದ್ದು, ಅಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕಲ್ಪತರು ನಾಡಿನಲ್ಲಿ ಸಾಧನೆಗೈದ ವಿವಿಧ ಸಾಧಕರಿಗೆಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಲ್ಪತರುರತ್ನ ಪ್ರಶಸ್ತಿಯನ್ನು ವಿತರಣೆ ಮಾಡಲಾಗುವುದು, ಅಲ್ಲದೇ ಈ ಸಮಾರಂಭದಲ್ಲಿ ಕೆಯುಡಬ್ಲ್ಯೂಜೆ ತನ್ನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಧಾನ ಮಾಡುವುದರ ಮೂಲಕ ಕಾರ್ಯಕ್ರಮವನ್ನು ನಡೆಸಲಾಗುವುದು. ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು, ಮಹಿಳಾ ಪದಾಧಿಕಾರಿಗಳು, ಮಹಿಳಾ ಸಂಘಟಕರು ಸೇರಿದಂತೆ ಸಾರ್ವಜನಿಕರಿಗೆ ಸಮ್ಮೇಳನಕ್ಕೆ ಮುಕ್ತ ಅವಕಾಶವಿದ್ದು, ಈ ಸಮ್ಮೇಳನಕ್ಕೆ ಬಂದು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.