nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆ ಪಾತ್ರ ಮಹತ್ವದ್ದು: ಸಚಿವ  ಡಾ.ಎಂ.ಸಿ.ಸುಧಾಕರ್
    ರಾಜ್ಯ ಸುದ್ದಿ December 4, 2024

    ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆ ಪಾತ್ರ ಮಹತ್ವದ್ದು: ಸಚಿವ  ಡಾ.ಎಂ.ಸಿ.ಸುಧಾಕರ್

    By adminDecember 4, 2024No Comments4 Mins Read
    rani chennamma

    ಬೆಳಗಾವಿ:  ಭಾರತ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳು ಪದವಿಯ ನಂತರ  ಸಮಗ್ರ ಜ್ಞಾನ ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ಸಾಮಾಜಿಕ–ಆರ್ಥಿಕ–ಶೈಕ್ಷಣಿಕವಾಗಿ ಭಾರತವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ  ಡಾ.ಎಂ.ಸಿ.ಸುಧಾಕರ್ ಅವರು ತಿಳಿಸಿದರು.

    ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎಪಿಜೆ ಅಬ್ದುಲ್ ಕಲಾಂ “ಜ್ಞಾನ ಸಂಗಮ” ಸಭಾಂಗಣದಲ್ಲಿ ಬುಧವಾರ (ಡಿ.3) ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.


    Provided by
    Provided by

    ವಿದ್ಯಾರ್ಥಿ ಜೀವನದ ಅಂತರ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಜ್ಞಾನವಂತ, ಕೌಶಲ್ಯಪೂರ್ಣ ಮತ್ತು ಶಸಕ್ತ ವ್ಯಕ್ತಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾಲಿಡುವ ಮೂಲಕ ಯಶಸ್ಸು ಗಳಿಸಲು ಮುಂದಾಗಬೇಕು ಎಂದು ಹೇಳಿದರು.

    ಸ್ವಾತಂತ್ರ್ಯ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕಿತ್ತೂರಿನ ವೀರ ರಾಣಿ ಹೆಸರಿನ ವಿಶ್ವವಿದ್ಯಾಲಯ ಇದಾಗಿದೆ. ರಾಣಿ ಚನ್ನಮ್ಮ ಎಂದರೆ ಅದಮ್ಯ ರಾಷ್ಟ್ರಪ್ರೇಮ, ಸ್ವಾಭಿಮಾನ ಹಾಗೂ ಸ್ತ್ರೀಶಕ್ತಿ ಸಂಕೇತ, ಬೆಳಗಾವಿ–ವಿಜಯಪುರ ಭಾಗದ ಜನರಿಗೆ ಜ್ಞಾನದ ಬೆಳಕು ಹಂಚುವ ಪಾತ್ರ ವಿಶ್ವವಿದ್ಯಾಲಯ ವಹಿಸಿಕೊಂಡಿದೆ.

    ವಿಶ್ವವಿದ್ಯಾಲಯದ ಬೆಳವಣಿಗೆ ಒಂದು ಭಾಗದ ಅಭಿವೃದ್ಧಿ ಮಾತ್ರವಲ್ಲದೆ ರಾಜ್ಯ ಮತ್ತು ರಾಷ್ಟ್ರದ ಶೈಕ್ಷಣಿಕ ಅಭಿವೃದ್ಧಿಪರ ಕೊಡುಗೆಗಳನ್ನು ನೀಡುತ್ತಿದೆ ಎಂದರು.

    ಸಮಾಜದ ಪ್ರಗತಿಯಲ್ಲಿ ಶಿಕ್ಷಣದ ಪಾತ್ರ:

    ಉನ್ನತ ಶಿಕ್ಷಣವು ಸಮಾಜದ ಬದಲಾವಣೆಯಲ್ಲಿ  ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವುದು ಮಾತ್ರವಲ್ಲದೆ ನಾವಿನ್ಯತೆಯನ್ನು ಉತ್ತೇಜಿಸುತ್ತದೆ. ಸಮಾನ ಮತ್ತು ಪ್ರಗತಿಶೀಲ ಸಮಾಜವನ್ನು ಸೃಷ್ಟಿಸುತ್ತದೆ.

    ವಿಶ್ವವಿದ್ಯಾಲಯ ಕೇವಲ ಪದವಿ ಉತ್ಪಾದಿಸುವ ಕಾರ್ಖಾನೆಗಳಲ್ಲ. ವಿಷಯಜ್ಞಾನ ಕಾರ್ಯಗಳಿಗೆ ಅಳವಡಣಾಶಕ್ತಿ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಪೋಷಿಸುವ ಕೇಂದ್ರಗಳಾಗಬೇಕು. ಪದವಿಯ ನಂತರ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ರೂಪಗೊಳ್ಳಬೇಕು ಎಂದು ತಿಳಿಸಿದರು.

    ಸ್ಪರ್ಧಾತ್ಮಕ ಜಗತ್ತಿನಲ್ಲಿ, ತಂತ್ರಜ್ಞಾನ ಬೆಳವಣಿಗೆ ಹೊಂದಿ ಸಮಾಜದಲ್ಲಿ ಶಿಕ್ಷಣದ ವ್ಯವಸ್ಥೆಯಲ್ಲಿ ಬಹಳಷ್ಟು ಬದಲಾವಣೆಯನ್ನು ಕಂಡಿದ್ದೇವೆ. ಖಾಸಗಿ ಕಾಲೇಜುಗಳಲ್ಲಿ ಓದಿಸಲು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರಿಗೆ ವಿಶ್ವವಿದ್ಯಾಲಯಗಳು ಅತೀ ಕಡಿಮೆ ಶುಲ್ಕ ಪಡೆದು ಶಿಕ್ಷಣ ಒದಗಿಸುವ ಮೂಲಕ ಆರ್ಥಿಕವಾಗಿ ಆಧಾರವಾಗಿವೆ.

    ಕೌಶಲ್ಯಕ್ಕೆ ಆದ್ಯತೆ ನೀಡಿ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿ ಇಂಗ್ಲಿಷ್ ಭಾಷೆಯಮೇಲೆ ಹಿಡಿತ ಸಾಧಿಸುವ ಕೆಲಸಕ್ಕೆ ವಿಶ್ವವಿದ್ಯಾಲಯಗಳು ಚಿಂತನೆ ನಡೆಸಿವೆ. ವಿಶ್ವವಿದ್ಯಾಲಯವು ವಿನೂತನ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕೌಶಲ್ಯ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು

    ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ  ಡಾ. ಎಂ.ಸಿ.ಸುಧಾಕರ್ ಅವರು ತಿಳಿಸಿದರು.

    ವಿಶ್ವಸಂಸ್ಥೆಯ ಸಲಹೆಗಾರರು, ಅಂತರರಾಷ್ಟ್ರೀಯ ಪ್ರಖ್ಯಾತ ವಿಜ್ಞಾನಿ, ಯು.ಎನ್ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ ಮಾಜಿ ಹಿರಿಯ ಅಧಿಕಾರಿ ಮಂಗಳೂರಿನ ಡಾ. ಇಡ್ಯಾ ಕರುಣಾಸಾಗರ ಅವರು ಮಾತನಾಡಿ ಇಂದಿನ ಯುವ ಪೀಳಿಗೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಧೈರ್ಯ, ಶೌರ್ಯ ಮತ್ತು ಪ್ರತಿಭಟನೆಯ ಪ್ರತೀಕ, ರಾಣಿ ಚನ್ನಮ್ಮ ಅವರ ಹೆಸರನ್ನು ಸ್ಮರಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.

    ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಪದವಿಗಳನ್ನು ಪಡೆದ ಎಲ್ಲಾ ಪದವೀಧರರು, ಸ್ನಾತಕೋತ್ತರ ಪದವೀಧರರು, ಡಾಕ್ಟರೇಟ್‌ಗಳಿಗೆ ಇಂದು ಉತ್ತಮ ದಿನ. ಘಟಿಕೋತ್ಸವದಲ್ಲಿ ಪದವಿಗಳನ್ನು ಪಡೆಯುವುದು ಪ್ರತಿಯೊಬ್ಬ ಯುವಕನ ಜೀವನದಲ್ಲಿ ಒಂದು ದೊಡ್ಡ ಮೈಲಿಗಲ್ಲು.

    ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಹೆಚ್ಚಿನ ಪ್ರಯತ್ನಗಳನ್ನು ಮಾಡುತ್ತಿದೆ. ಯುವ ಪದವೀಧರರು ಎಲ್ಲಾ ಕೌಶಲ್ಯಗಳೊಂದಿಗೆ ಸಂಪೂರ್ಣವಾಗಿ ಸಜ್ಜುಗೊಂಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧಿಸುವುದು ಅವರ ಮುಂದಿನ ವೃತ್ತಿಜೀವನದಲ್ಲಿ ಅಗತ್ಯವಿದೆ

    ಭಾರತದಲ್ಲಿ ಪ್ರತಿ ವರ್ಷ ಮಿಲಿಯನ್ ಲೆಕ್ಕದಲ್ಲಿ ಮಕ್ಕಳು ಶಾಲೆಗಳಿಗೆ ದಾಖಲಾಗುತ್ತಾರೆ ಮತ್ತು ಕೇವಲ ಮಿಲಿಯನ್ ಮಾತ್ರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾಗುತ್ತಾರೆ. ಭಾರತದಲ್ಲಿ ವಾರ್ಷಿಕ ಪದವೀಧರರ ಸಂಖ್ಯೆ ಕೇವಲ 5.6  ಮಿಲಿಯನ್ ಇದೆ ಅವರಲ್ಲಿ ನೀವು ಒಬ್ಬರು ಅದೃಷ್ಟವಂತರು.

    ವಿದ್ಯಾರ್ಥಿ ಜೀವನದಲ್ಲಿ ಸಾಧಿಸಲು ನಿಮ್ಮ ಪ್ರಯಾಣದಲ್ಲಿ ನೀವು ತೋರಿದ ಶ್ರಮ, ತಾಳ್ಮೆ ಮತ್ತು ಪರಿಶ್ರಮದ ಬಗ್ಗೆ ತಿಳಿದಿದೆ. ನಿಮ್ಮ ಪೋಷಕರು ಮಾಡಿದ ಸಂಕಲ್ಪ ಮತ್ತು ತ್ಯಾಗಗಳು ಮತ್ತು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಿಕ್ಷಕರು ಒದಗಿಸಿದ ವೃತ್ತಿಪರತೆ, ಸಮರ್ಪಣೆ, ಸಹಾನುಭೂತಿ ಮತ್ತು ಮಾರ್ಗದರ್ಶನದಿಂದ ಪದವಿ ಪಡೆದುಕೊಂಡಿದ್ದೀರಿ ಎಂದರು.

    ಜೀವನದಲ್ಲಿ ಮಹತ್ತರವಾದುದನ್ನು ಸಾಧಿಸಲು ನಿಮ್ಮೆಲ್ಲರಿಗೂ ಅಪಾರವಾದ ಸಾಮರ್ಥ್ಯವಿದೆ . ನಮ್ಮ ಮಾಜಿ ರಾಷ್ಟ್ರಪತಿ, ವಿಜ್ಞಾನಿ, ದಾರ್ಶನಿಕ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಹೇಳಿದಂತೆ ಶ್ರೇಷ್ಠ ಗುರಿ ಹೊಂದಿ, ಜ್ಞಾನ ಸಂಪಾದನೆ, ಕಠಿಣ ಪರಿಶ್ರಮದಿಂದ ಏನನ್ನು ಬೇಕಾದರೂ ಸಾಧಿಸಬಹುದು. ಸೂರ್ಯನಂತೆ ಬೆಳಗಬೇಕೆಂದರೆ. ಮೊದಲು ಸೂರ್ಯನಂತೆ ಉರಿಯಬೇಕು ಎಂಬುದನ್ನು ಅರಿತುಕೊಳ್ಳಬೇಕು.

    ನಿಮ್ಮ ವೃತ್ತಿಪರ ಪ್ರಯಾಣದ ಸಮಯದಲ್ಲಿ ವೈಫಲ್ಯದ ಭಯಪಡಬೇಡಿ. ಡಾ. ಅಬ್ದುಲ್ ಕಲಾಂ ಅವರು “ನೀವು ವಿಫಲವಾದರೆ, ಎಂದಿಗೂ ಬಿಟ್ಟುಕೊಡಬೇಡಿ ಏಕೆಂದರೆ ಫೆಲ್ ಎಂದರೆ ಕಲಿಕೆಯಲ್ಲಿ ಮೊದಲ ಪ್ರಯತ್ನ” ಎಂದು ಹೇಳಿದ್ದಾರೆ.

    ಹಾಗಾಗಿ ಪದವೀಧರರು ಯಾವುದೇ ಭಯವಿಲ್ಲದೇ ಉತ್ತಮ ಜೀವನ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಮಾದರಿ ವ್ಯಕ್ತಿಗಳಾಗಬೇಕು ಎಂದು ಡಾ.ಇಡ್ಯಾ ಕರುಣಾಸಾಗರ ಅವರು ತಿಳಿಸಿದರು.

    ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

    ಗೌರವ ಡಾಕ್ಟರೇಟ್ ಪದವಿ ಪ್ರದಾನ:

    ಪ್ರದರ್ಶನ ಕಲೆಗಳ ಕ್ಷೇತ್ರದಲ್ಲಿ ಪದ್ಮಶ್ರೀ ಪಂಡಿತ್ ಎಸ್. ಬಾಲೇಶ್ ಭಜಂತ್ರಿ, ಉದ್ಯಮಶೀಲತೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗೋಪಾಲ ದೇವೇಂದ್ರ ಜಿನಗೌಡ ಹಾಗೂ ನಾಗರಿಕ, ಕ್ರೀಡೆ, ಲೋಕೋಪಕಾರಿ ಸೇವಾ ಕ್ಷೇತ್ರದಲ್ಲಿ ಗೋಪಾಲ ಬಿ. ಹೊಸೂರ ಇವರುಗಳಿಗೆ ‘ಡಾಕ್ಟರ್ ಆಫ್ ಲೆಟರ್ಸ್’ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.

     ಚಿನ್ನದ ಪದಕ:

    ಘಟಿಕೋತ್ಸವದಲ್ಲಿ ಒಟ್ಟು 38,512 ವಿದ್ಯಾರ್ಥಿಗಳು ಪದವಿ ಮತ್ತು 5909 ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡರು ಇದರಲ್ಲಿ ಎಂ.ಎ(ಕನ್ನಡ) ವಿಷಯದಲ್ಲಿ ರ್‍ಯಾಂಕ್‌ ಗಳಿಸಿದ ಮತ್ತು ವಿಷಯವಾರು ಹೆಚ್ಚಿನ ಅಂಕ ಪಡೆದ ಮಹೇಶ್ವರಿ ತೇಗೂರ ಎರಡು ಚಿನ್ನದ ಪದಕಗಳು, ಬಿ.ಕಾಂ ವಿನಾಯಕ ತೇಲಿ, ಬಿ.ಎಸ್ಸಿ ಕುಮಾರೇಶ ಕಾತರಕಿ, ಎಂ.ಎ(ಸಮಾಜಶಾಸ್ತ್ರ) ವಿಷಯದಲ್ಲಿ ಐಶ್ವರ್ಯಾ ಪಾಟೀಲ, ಎಂಬಿಎ ಪೂರ್ಣಿಮಾ ದೇಸಾಯಿ, ಎಂ.ಎಸ್ಸಿ(ಗಣಿತ) ವಿಷಯದಲ್ಲಿ ಶಿವಕುಮಾರ ಸರದಾರ ಹಾಗೂ ವಿಷಯವಾರು ಹೆಚ್ಚಿನ ಅಂಕ ಗಳಿಸಿದ ವಿನಯ ಘೂಳಪ್ಪನವರ, ಸುಜಾತಾ ಕೇಸ್ತಿ, ನಿವೇದಿತಾ ಕಾಟಕರ, ಸಂಗೀತಾ ಬಸಗೌಡನವರ ಅವರಿಗೆ ತಲಾ ಒಂದು ಚಿನ್ನದ ಪದಕ ವಿತರಿಸಲಾಯಿತು

    ಅದೇ ರೀತಿಯಲ್ಲಿ  123 ಪಿಎಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಯಿತು. ಬಳಿಕ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇ–ವಿದ್ಯಾ ಅಪ್ಲಿಕೇಶನ್ ಬಿಡುಗಡೆ ಮಾಡಲಾಯಿತು.

    ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ, ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರ ಎನ್. ಕದಮ್, ಹಣಕಾಸು ಅಧಿಕಾರಿ ಎಂ.ಎ ಸ್ವಪ್ನ, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳ, ಪಾಲಕರು ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ…

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.