ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ಪೊಲೀಸ್ ಠಾಣೆ ಸಮೀಪ ವಕೀಲನಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಮಂಜುನಾಥ್(30) ಹಲ್ಲೆಗೊಳಗಾದ ವಕೀಲರಾಗಿದ್ದಾರೆ.
ಬೆನ್ನಿಗೆ ಮತ್ತು ಕೈಗೆ ಚಾಕುವಿನಿಂದ ಇರಿಯಲಾಗಿದ್ದು, ನೆರವಿಗೆ ಧಾವಿಸಿದ ಆಟೋ ಡ್ರೈವರ್ ಮೇಲೆಯೂ ಹಲ್ಲೆ ಮಾಡಲಾಗಿದೆ. ಸದ್ಯ ಗಾಯಾಳುವಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ವೇಳೆ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


