ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಈ ಸಮುದಾಯ ಒಳ್ಳೆಯ ಬುನಾದಿಯನ್ನು ಹಾಕಿದೆ. ಭಾರತೀಯ ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದರು.
ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯೇಷನ್ ಥೆರಪಿ ಸೇವೆಯನ್ನು ಆರಂಭಿಸಲಾಯಿತು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯೇಷನ್ ಥೆರಪಿ ಸೇವೆಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಆರ್.ವಿ. ದೇಶಪಾಂಡೆ, ಬೈರತಿ ಸುರೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


