ಬಾಲಿವುಡ್ ನ ಹೆಸರಾಂತ ಗಾಯಕ ಲಕ್ಕಿ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಎಕ್ಸ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಲಕ್ಕಿ ಅಲಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಎಎಸ್ ಪತಿ ಸುಧೀರ್ ರೆಡ್ಡಿ ಭೂ ಮಾಫಿಯಾ ಜೊತೆಗೆ ಕೈ ಜೋಡಿಸಿಕೊಂಡು ಅತಿಕ್ರಮಿಸುತ್ತಿದ್ದಾರೆ.
ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ನಿರಾಕರಿಸುತ್ತಿದ್ದಾರೆ. ಆದರೆ ಇದು ಸಂಪೂರ್ಣ ಕಾನೂನು ಬಾಹಿರ ಎಂದು ಕಾನೂನು ಸಲಹೆಗಾರರು ಹೇಳುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.


