ಮಾಜಿ ಸಚಿವ ಎಚ್.ಡಿ. ರೇವಣ್ಣ ಬಂಧನ ಹಿನ್ನಲೆ ಗದಗದಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮಾಜಿ ಮಂತ್ರಿಗಳಾದ ರೇವಣ್ಣ ಅವರನ್ನು ನಮ್ಮ ಪೊಲೀಸರು ಬಂಧನ ಮಾಡಿದ್ದಾರೆ. ಕಾನೂನು ತನ್ನ ಕ್ರಮ ತೆಗೆದುಕೊಂಡಿದೆ. ಅವರ ವಿರುದ್ಧ ಇರುವ ಆಪಾದನೆಗಳ ಹಿನ್ನಲೆಯಲ್ಲಿ ಕೇಸ್ ರಿಜಿಸ್ಟರ್ ಆಗಿತ್ತು. ಕೆಲವು ಪುರಾವೆಗಳು ಲಭ್ಯವಾಗಿದ್ದವು.
ಆ ಹಿನ್ನಲೆಯಲ್ಲಿ ಅವರನ್ನು ಬಂಧನ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿಷಯ ಅವರು ಎಲ್ಲೆ ಇರಲಿ, ಅವರನ್ನು ಬಂಧನ ಮಾಡುವುದಕ್ಕೆ ಸೂಕ್ತವಾದ ಕ್ರಮ ಜಾರಿಯಲ್ಲಿದೆ ಎಂದರು. ಇನ್ನೂ ಎಸ್.ಐಟಿ ತನಿಖೆ ಚುರುಕು ಗೊಳ್ಳುವ ವಿಚಾರವಾಗಿ ಮಾತನಾಡಿ, ಸಹಜವಾಗಿ ಚುರುಕುಗೊಳ್ಳಲಿದೆ. ಹೈಕೋರ್ಟ್ ನವರು ಜಾಮೀನು ಅರ್ಜಿ ರಿಜೆಕ್ಟ್ ಮಾಡಿದ್ದಾರೆ. ಆ ಮೇಲೆ ಇವರ ಬಂಧನ ಆಗಿದೆ. ಕಾನೂನು, ನ್ಯಾಯ, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ಹೇಳಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296