ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ. ಎಸ್ಸಿಪಿ ಟಿಎಸ್ ಪಿ ಕಾಯ್ದೆಯಡಿ ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ದಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ. ಗ್ಯಾರೆಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ಅವರು ಆರೋಪಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


