ಕೇರಳದ ಕಣ್ಣೂರು ಜಿಲ್ಲೆಯ ಕಿಣಿಚಿರಾ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಮೊಬೈಲ್ ಬಳಸಬೇಡ ಅಂದಿದ್ದಕ್ಕೆ ಯುವಕನೊಬ್ಬ ತಾಯಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಯಲ್ಲಿ ಒಂದು ವಾರ ಚಿಕಿತ್ಸೆ ಪಡೆದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ತಕ್ಷಣ ಬಂಧಿಸಿದ್ದಾರೆ. ಆರೋಪಿ ಮಾನಸಿಕ ಅಸ್ವಸ್ಥ ಎಂದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


