ಬಾಗಲಕೋಟೆ: ಆಸ್ತಿಗಾಗಿ ಸುಪಾರಿ ಕೊಟ್ಟು ಅಪ್ಪನನ್ನೇ ಮಗ ಕೊಲೆ ಮಾಡಿಸಿದ್ದಾನೆ. ಚೆನ್ನಪ್ಪ (66) ಕೊಲೆಯಾದ ತಂದೆ. ಚನ್ನಬಸಪ್ಪ ಕೊಲೆ ಮಾಡಿಸಿದ ಮಗ. ಮಾಂತೇಶ್ ಮರಡಿಮಠ ಕೊಲೆ ಮಾಡಿದ ಆರೋಪಿ.
ಚೆನ್ನಪ್ಪನ ಕುಟುಂಬ 37 ಎಕರೆ ಜಮೀನನ್ನು ಹೊಂದಿದ್ದರು. ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ದಿನಾಲೂ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಚನ್ನಬಸಪ್ಪನನ್ನು ಕೊಲೆ ಮಾಡಲು ಯೋಚನೆ ರೂಪಿಸಿ, ವಿಜಯಪುರ ಜಿಲ್ಲೆಯ ನಿಡಗುಂದಿ ಮೂಲದ ಮಾಂತೇಶ್ ಮರಡಿಮಠ ಎಂಬುವನಿಗೆ 3 ಲಕ್ಷ ರೂ. ನೀಡಿ ಚೆನ್ನಪ್ಪನನ್ನು ಕೊಲೆ ಮಾಡುವಂತೆ ಸುಫಾರಿ ನೀಡಿದ್ದಾರೆ.
ಸುಫಾರಿ ಪಡೆದ ಮಾಂತೇಶ್ ಮರಡಿಮಠ ಜನವರಿ 25ರ ರಾತ್ರಿ ರಾಂಪುರ ಗ್ರಾಮದ ಬಳಿ ಚೆನ್ನಪ್ಪನನ್ನು ಮಚ್ಚಿನಿಂದ ಕೊಚ್ಚಿ, ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತ್ತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸರ ತನಿಖೆ ನಡೆಸಿ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣದ ಆರೋಪಿಗಳಾದ ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ ಸೇರಿದಂತೆ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
a


