ಬೆಂಗಳೂರು: ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಒಂದು ವರ್ಷದಲ್ಲಿ 3ನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳ ಮಾಡಲು ಮುಂದಾಗಿದೆ.
ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಜೆಟ್ ಗೂ ಮುನ್ನವೇ ಬಿಯರ್ ದರ ಏರಿಕೆ ಮಾಡಲು ನಿರ್ಧರಿಸಿದೆ.
ಜನವರಿ 20ರಿಂದ ಬಿಯರ್ ಬೆಲೆ ಕನಿಷ್ಠ 15 ರೂಪಾಯಿಯಿಂದ 50 ರೂಪಾಯಿವರೆಗೂ ಹೆಚ್ಚಳವಾಗುವ ಸಾಧ್ಯತೆ ಇದ್ದು, ಒಂದು ವೇಳೆ ಹೆಚ್ಚಳವಾದರೆ ಒಂದು ವರ್ಷದಲ್ಲಿ ಮೂರನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳವಾದಂತೆ ಆಗುತ್ತದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು, ಬಿಯರ್ ಬೆಲೆ ಏರಿಕೆ ಕುರಿತಂತೆ ಚರ್ಚೆಗಳು ನಡೆಯುತ್ತಿವೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ. ಬಿಯರ್ ಬೆಲೆ ಹೊರತುಪಡಿಸಿ ಬೇರೆ ಯಾವುದೇ ಮದ್ಯದ ಬೆಲೆಯ ಹೆಚ್ಚಳದ ಬಗ್ಗೆ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx