ರಾಜ್ಯ ಸರಕಾರ ಜನತೆಗೆ ಶಾಕ್ ನೀಡಿದ್ದು, ಕರ್ನಾಟಕದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ.
ಇದುವರೆಗೆ ಪೆಟ್ರೋಲ್ಗೆ ರಾಜ್ಯ ಸರ್ಕಾರವು ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ.
ಒಂದು ಲೀಟರ್ ಪೆಟ್ರೋಲ್ಗೆ 3 ರೂ. ಹಾಗೂ ಡೀಸೆಲ್ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಇನ್ನು ಮುಂದೆ ಪೆಟ್ರೋಲ್ ದರ ಲೀಟರ್ಗೆ 103 ರೂ.ಗೆ ಹಾಗೂ ಡೀಸೆಲ್ 91 ರೂ. 50 ಪೈಸೆ ಏರಿಕೆಯಾಗಿದೆ. ಈ ಹಿಂದೆಯೇ ಡೀಸೆಲ್ ಮತ್ತು ಪೆಟ್ರೋಲ್ ಮಾರಾಟ ತೆರಿಗೆ ದರವನ್ನು ಏರಿಸಬೇಕೆಂಬ ಪ್ರಸ್ತಾವನೆ ಸರ್ಕಾರದ ಮುಂದಿತ್ತಾದರೂ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಡೆಹಿಡಿಯಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA