ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಪ್ರತಿನಿತ್ಯ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಹೊರಡಿಸಿತ್ತು.
ಸಿಡಬ್ಲ್ಯೂಎಂಎ ಆದೇಶಕ್ಕೆ ಮಣಿದಿರುವ ರಾಜ್ಯ ಸರ್ಕಾರ ರಾತ್ರೋರಾತ್ರಿ ಕೆಆರ್ ಎಸ್ ಡ್ಯಾಂ ನಿಂದ ತಮಿಳುನಾಡಿಗೆ ನೀರು ಹರಿಬಿಟ್ಟಿದೆ. ಪ್ರಾಧಿಕಾರದ ಆದೇಶದಂತೆ ರಾಜ್ಯ ಸರ್ಕಾರ ನೀರು ಹರಿಸಲು ಆರಂಭಿಸಿದೆ.


