ಬೆಂಗಳೂರು ಗ್ರಾಮಾಂತರ ಜಿಲ್ಲೆ: ದೊಡ್ಡಬಳ್ಳಾಪುರ ನಗರದ ತ್ಯಾಗರಾಜನಗರದಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕಾಲೇಜಿನಿಂದ ಬಂದ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ಜಾನ್ಸಿ (17) ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ನಲ್ಲಿ, ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯೂ. ನಾನು ಈ ಲೋಕವನ್ನು ಬಿಟ್ಟು ತೆರಳುತ್ತಿದ್ದೇನೆ. ಎಲ್ಲರೂ ಖುಷಿಯಾಗಿರಿ ಎಂದು ಬರೆದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


