ಬೆಂಗಳೂರು: ನಾವು ನಲಪಾಡ್ ಕಡೆಯವರು ಎಂದು ವಿದ್ಯಾರ್ಥಿಯನ್ನು ಬೆದರಿಸಿ, ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕಿಡ್ನಾಪ್ ಮಾಡಿ ಸುಲಿಗೆ ಮಾಡಿರುವ ಕುರಿತು ನಾಲ್ವರ ವಿರುದ್ಧ ಜೀವನ್ ಜೈನ್ ಎಂಬ ವಿದ್ಯಾರ್ಥಿ ಆರೋಪ ಮಾಡಿದ್ದಾನೆ.
ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್ ಜೈನ್ ಎಂಬ ವಿದ್ಯಾರ್ಥಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ. ಆದರೆ ಹೇಳಿದ ಸಮಯಕ್ಕೆ ಹಣ ನೀಡಲು ಆಗಿರಲಿಲ್ಲ. ತಡವಾಗಿ ಸಾಲ ತೀರಿಸಿದ್ದ. ಆದರೆ ಕಿಡಿಗೇಡಿಗಳು ಸಾಲ ತೀರಿಸಿದರೂ ಆತನನ್ನು ಬಿಡದೆ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಲೇಟಾಗಿ ಹಣ ಕೊಟ್ಟಿದ್ದಕ್ಕೆ ಕಿಡ್ನಾಪ್ ಮಾಡಿ ಬೆದರಿಸಲಾಗಿದೆ. ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಎಂದು ಬೆದರಿಸಿದ್ದಾರೆ ವಿದ್ಯಾರ್ಥಿ ಪೊಲೀಸ್ ಕಮಿಷನರ್ ಗೆ ಮೇಲ್ ಮಾಡಿ ದೂರು ನೀಡಿದ್ದಾನೆ.
ಇನ್ನೂ ತನ್ನನ್ನು ಬಲವಂತವಾಗಿ ಬೆಟ್ಟಿಂಗ್ ಬಲೆಗೆ ಬೀಳಿಸಿದ್ದಾರೆ ಎಂದೂ ಆತ ಆರೋಪಿಸಿದ್ದಾನೆ. ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟು ತನ್ನನ್ನು ಬೆತ್ತಲೆಗೊಳಿಸಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


