ಶಿವಮೊಗ್ಗ: ಶಾಲೆಯೊಂದರಲ್ಲಿ ಬ್ರಾಹ್ಮಣ ಬಾಲಕಿಗೆ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪೋಷಕರು ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಶಿವಮೊಗ್ಗದ ಹೊಸನಗರ ತಾಲೂಕಿನ ಶಾಲೆಯೊಂದರಲ್ಲಿ 2ನೇ ತರಗತಿ ಒದುತ್ತಿರುವ ವಿದ್ಯಾರ್ಥಿನಿಗೆ ಶಿಕ್ಷಕರು ಒತ್ತಾಯ ಮಾಡಿ ಮೊಟ್ಟೆ ತಿನ್ನಿಸಿದ್ದಾರೆ.
ಒಲ್ಲದೆ ಮೊಟ್ಟೆ ತಿಂದಿದ್ದರಿಂದ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು ಮನಸ್ಸಿಗೂ ಘಾಸಿಯಾಗಿದೆ ಎಂದು ವಿದ್ಯಾರ್ಥಿನಿಯ ಪೋಷಕರು ತಿಳಿಸಿದ್ದಾರೆ.


