ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ ಗ್ರಾಮದ ಬಳಿ ಕಲಬುರಗಿ-ಸೇಡಂ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಮುಖಂಡ ಮಲ್ಲಿನಾಥ ಸಿಂಘೆ (35) ಅವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಜಿಲ್ಲೆಯ ಶಹಾಬಾದ್‌ನವರಾದ ಮಲ್ಲಿನಾಥ ಅವರು ಕಲಬುರಗಿಯಲ್ಲಿ ನೆಲೆಸಿದ್ದರು. ವಾಡಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದರಿಂದ ಬೈಕ್ ಮೇಲಿಂದ ಕೆಳಕ್ಕೆ ಬಿದ್ದಿದ್ದು, ಅಪಘಾತದ ರಭಸಕ್ಕೆ ತಲೆಯ ಭಾಗಕ್ಕೆ ತೀವ್ರ ಹಾನಿಯಾಗಿದ್ದು, ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಮಾಡಬೂಳ ಠಾಣೆಯ ಪೊಲೀಸರು ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಸಾಗಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


