ಮುದ್ದೇಬಿಹಾಳ: ತಾಲ್ಲೂಕಿನ ಢವಳಗಿ ಹಳ್ಳದ ಸಮೀಪದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ. ಮಸಬಿನಾಳದ ದೊಡ್ಡಯ್ಯ ರಾಚಯ್ಯ ಪುರಾಣಿಕಮಠ(37), ತಾಳಿಕೋಟಿ ತಾಲ್ಲೂಕಿನ ಜಲಪೂರದ ಪುಷ್ಪಾವತಿ ಶಿವಪುತ್ರಯ್ಯ ಹಿರೇಮಠ (55) ಮೃತ ದುರ್ದೈವಿಗಳಾಗಿದ್ದಾರೆ.
ಮದುವೆಗೆ ಹೋಗಿ ವಾಪಸ್ ಊರಿಗೆ ತೆರಳುವ ಸಂದರ್ಭದಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಸ್ಥಳಕ್ಕೆ ಪಿಎಸ್ ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296