ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ಮೂವರು ಯುವಕರು ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಕುಶಾಲ ನಗರ ಸಮೀಪದ ಕೂಡಿಗೆಯಲ್ಲಿ ಸಂಭವಿಸಿದೆ. ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು ಯುವಕರಾದ ವಿನೋದ್, ಸಚಿನ್, ಶ್ರೀನಿವಾಸ್ ಎಂಬ ಯುವಕರು ಮೃತಪಟ್ಟಿದ್ದಾರೆ.
ಯುವಕರು ಒಂದೇ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಕಾರು ನದಿಯ ಬದಿಯಲ್ಲಿ ನಿಂತಿದೆ. ಈಜಲು ತೆರಳಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ.
ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ನಾಪತ್ತೆಯಾದವರ ಹುಡುಕಾಟ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


