ಸರಗೂರು: ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಸರಗೂರು ಯೂಥ್ ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷ ಮಸಹಳ್ಳಿ ನವೀನ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸರಗೂರು ಯೂಥ್ ಬ್ಲಾಕ್ ವತಿಯಿಂದ ಶನಿವಾರ ಕಳೆದ ಲೋಕಸಭಾ ಚುನಾವಣೆಯಲ್ಲಿ ನಡೆದಂತಹ ಮತಗಳ್ಳತನ ವಿಚಾರವಾಗಿ ಚುನಾವಣೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದ್ದು, ಅ.5 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶಕ್ಕೆ ಯೂಥ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಬೇಕು ಎಂದು ಸಭೆಯ ಅಧ್ಯಕ್ಷತೆ ವಹಿಸಿ ಕಾರ್ಯಕರ್ತರನ್ನು ಮನವಿ ಮಾಡಿ ಮಾತನಾಡಿದರು.
ಎಐಸಿಸಿ ಅಧ್ಯಕ್ಷರು ಮತ್ತು ರಾಜ್ಯ ಸಭಾ ವಿರೋಧ ಪಕ್ಷದ ನಾಯಕರು ಆದ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿರವರು ಬೆಂಗಳೂರಿಗೆ ಬರುತ್ತಿಲಿದ್ದಾರೆ. ಆದರಿಂದ ಶಾಸಕ ಅನಿಲ್ ಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿಗೆ ಹೋಗಬೇಕು ಎಂದು ಆದೇಶ ನೀಡಿದ್ದಾರೆ ಎಂದರು.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.
ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಮಾತನಾಡಿ, ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ನಾವುಗಳು ಪಕ್ಷದ ಜೊತೆಯಲ್ಲಿ ಯೂಥ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘’ಮತಗಳ್ಳತನ’’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದರು.
ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಂಡಿದ್ದಾರೆ.
ರಾಹುಲ್ ಗಾಂಧಿ ಹೇಳಿದ ಕ್ಷೇತ್ರ ಯಾವುದು ಎನ್ನುವ ಕುತೂಹಲ ಇನ್ನಷ್ಟು ಜಾಸ್ತಿಯಾಗಿದೆ. ಅದು, ಬೆಂಗಳೂರು ಗ್ರಾಮಾಂತರವೋ ಅಥವಾ ಬೆಂಗಳೂರು ಕೇಂದ್ರವೋ ಅಥವಾ ಇನ್ಯಾವುದಾದರೂ ಬೇರೆ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿ ಉಲ್ಲೇಖಿಸುತ್ತಿದ್ದಾರೋ ಎನ್ನುವ ಕುತೂಹಲಕ್ಕೆ ಸದ್ಯದಲ್ಲೇ ತೆರೆ ಬೀಳಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಳಸೂರು ಬಸವರಾಜು, ಪಪಂ ಸದಸ್ಯ ಶ್ರೀನಿವಾಸ, ಯೂಥ್ ಕಾಂಗ್ರೆಸ್ ಉಪಾಧ್ಯಕ್ಷ ಯಾಸೀನ್, ಮಾಜಿ ಗ್ರಾಪಂ ಸದಸ್ಯ ಉಯ್ಯಂಬಳ್ಳಿ ನಾಗರಾಜು, ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ತಾಲೂಕು ಅಧ್ಯಕ್ಷ ಅಮೀರ್ ಸುಹೇಲ್, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಚೆಲುವರಾಜು, ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್, ಮುಖಂಡರು ಆರ್ಯ ಮಹೇಶ್,ಕೂಡಿಗಿ ಗೋವಿಂದರಾಜು, ಕುಮಾರ್, ಅಭಿಸರಗೂರು, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಮಫಿರ್, ಲಂಕೆ ದೆವರಾಜು, ದಯಾನಂದ,ಮಾದು, ನಾಗರಾಜು, ಮಾರ್ಕಂಡೇಯ, ಇನ್ನೂ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC