ಉತ್ತರ ಪ್ರದೇಶದಲ್ಲಿ ವ್ಯಾನ್ ಮರಕ್ಕೆ ಡಿಕ್ಕಿ ಹೊಡೆದು ನಾಲ್ವರು ವಿದ್ಯಾರ್ಥಿಗಳು ದಾರುಣ ಅಂತ್ಯ ಕಂಡಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ರಾಜ್ಯ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಹೋಗುತ್ತಿದ್ದ ವಾಹನಕ್ಕೆ ಅಪಘಾತ ಸಂಭವಿಸಿದೆ.
ಶಹಜಹಾನ್ ಪುರದ ಜರವಾವ್ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ರಾಜ್ಯ ಬೋರ್ಡ್ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳು ಕಾರಿನಲ್ಲಿ ಜೈತಿಪುರದ ಶಾಲೆಗೆ ಹೋಗುತ್ತಿದ್ದರು. ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಎಸ್ಪಿ(ನಗರ) ಸಂಜಯ್ ಕುಮಾರ್ ತಿಳಿಸಿದ್ದಾರೆ.
ಅನುರಪ್ ಖುಷ್ವಾಹ (15), ಅನುರಾಗ್ ಶ್ರೀವಾಸ್ತವ (14) ಮತ್ತು ಪ್ರತಿಷ್ಠಾ ಮಿಶ್ರಾ (15) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಹಿನಿ ಮೌರ್ಯ (16) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಇತರ ಆರು ಮಂದಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶದ ಬಲ್ಲಿಯಾ ಪ್ರದೇಶದಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಎರಡು ಕಾರುಗಳು ಮತ್ತು ಪಿಕಪ್ ಟ್ರಕ್ ಒಳಗೊಂಡ ಅಪಘಾತದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


