ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಇಡೀ ಕುಟುಂಬವೇ ಅಂತ್ಯ ಕಂಡ ಘಟನೆಯೊಂದು ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಯಿ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದು, ಇದನ್ನು ಕಂಡು ಪತಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.
ಕಲಬುರಗಿ ಮೂಲದ ಅವಿನಾಶ್(38), ಪತ್ನಿ ಮಮತಾ(30), ಮಕ್ಕಳಾದ ಅಧಿರಾ(5) ಮತ್ತು ಅಣ್ಣಯ್ಯ(3) ಮೃತಪಟ್ಟವರು.
ಮೊದಲು ತನ್ನಿಬ್ಬರು ಮಕ್ಕಳಿಗೆ ಮಮತಾ ವಿಷವುಣಿಸಿ ಸಾಯಿಸಿ ನಂತರ ನೇಣು ಹಾಕಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹೊರಗೆ ಹೋಗಿದ್ದ ಅವಿನಾಶ್ ಮನೆಗೆ ಬಂದಾಗ ನೇಣು ಹಾಕಿಕೊಂಡಿದ್ದ ಪತ್ನಿಯನ್ನು ಕೆಳಗಿಳಿಸಿ ನೋಡಿದಾಗ ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವುದು ಕಂಡುಬಂದಿದೆ. ನಂತರ ನೋವು ತಾಳಲಾರದೆ ಆತನೂ ಕೂಡ ನೇಣು ಹಾಕಿಕೊಂಡಿದ್ದಾರೆ.
ಅವಿನಾಶ್ ಮತ್ತು ಮಮತಾ ಅವರು ಮದುವೆಯಾದ ನಂತರ ಬೆಂಗಳೂರಿಗೆ ಬಂದು ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಕಾರು ಖರೀದಿಸಿ ಅವಿನಾಶ್ ಟ್ಯಾಕ್ಸಿ ಚಾಲಕ ವೃತ್ತಿ ಮಾಡುತ್ತಿದ್ದರು. ಪತ್ನಿ ಮಮತಾ ಅವರು ತನ್ನಿಬ್ಬರು ಮಕ್ಕಳನ್ನು ನೋಡಿಕೊಂಡು ಮನೆಯಲ್ಲಿಯೇ ಇರುತ್ತಿದ್ದರು. ದಸರಾಗೆ ಈ ಕುಟುಂಬ ಊರಿಗೆ ಹೋಗಿರಲಿಲ್ಲ. ಮಕ್ಕಳು ಹೊಸ ಬಟ್ಟೆ ತೊಟ್ಟು ಮನೆಯಲ್ಲಿಯೇ ಹಬ್ಬ ಆಚರಿಸಿದ್ದರು ಎಂದು ನೆರೆಹೊರೆಯವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q