nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದಾ ಶರ್ಮಾ ಅವರು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಪ್ಲಾಟ್ ಖರೀದಿ ಮಾಡಿದ್ದೇಕೆ..?
    ರಾಜ್ಯ ಸುದ್ದಿ April 7, 2024

    ಅದಾ ಶರ್ಮಾ ಅವರು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಪ್ಲಾಟ್ ಖರೀದಿ ಮಾಡಿದ್ದೇಕೆ..?

    By adminApril 7, 2024No Comments2 Mins Read
    adha sharma

    ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಇನ್ನೂ ಮಾಸಿಲ್ಲ. ಆತನ ಸಾವು ಆತ್ಮಹತ್ಯೆ ಎಂದು ಹೇಳಲಾಗುತ್ತಿದೆಯಾರೂ ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಕೊಲೆ ಇರಬಹುದು ಅನ್ನುವುದು ಕೂಡ ಬಾಲಿವುಡ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಸುಶಾಂತ್ ಹೆಸರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಅಂದು ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನು ನಟಿ ಅದಾ ಶರ್ಮಾ ಖರೀದಿಸಿದ್ದಾರೆ.

    ಮುಂಬೈನ ಮೋಂಟ್ ಬ್ಲ್ಯಾಂಕ್ ಅಪಾರ್ಟ್​ಮೆಂಟ್ ​ನಲ್ಲಿ ಸುಶಾಂತ್ ಸಿಂಗ್ ರಜಪೂತ್ ವಾಸ ಮಾಡುತ್ತಿದ್ದರು. 2020ರ ಜೂನ್ 14ರಂದು ಅವರು ಸಾವನ್ನಪ್ಪಿದ್ದರು. ಇದಾದ ಬಳಿಕ ಈ ಫ್ಲ್ಯಾಟ್ ಖಾಲಿಯೇ ಉಳಿದಿತ್ತು. ಯಾರೊಬ್ಬರೂ ಈ ಮನೆಯಲ್ಲಿ ಉಳಿದುಕೊಳ್ಳಲು ಕೂಡ ಮುಂದೆ ಬಂದಿರಲಿಲ್ಲ. ಹೀಗಾಗಿ, ಇದರ ಮಾಲೀಕರು ಈ ಅಪಾರ್ಟ್​ಮೆಂಟ್ ನ ಮಾರುವ ನಿರ್ಧಾರಕ್ಕೆ ಬಂದಿದ್ದರು. ನಂತರ ಅದಾ ಶರ್ಮಾ ಇದನ್ನು ಖರೀದಿ ಮಾಡಿದ್ದಾರೆ.


    Provided by
    Provided by

    ಯಾರಿಗೂ ಬೇಡವಾಗಿದ್ದ ಮನೆಯನ್ನು ಆದಾ ಶರ್ಮಾ ಖರೀದಿ ಮಾಡಿದ್ದೇಕೆ ಅನ್ನುವುದರ ಬಗ್ಗೆಯೇ ಇದೀಗ ಭಾರಿ ಚರ್ಚೆ ಶುರುವಾಗಿದೆ. ಈ ಬಗ್ಗೆ ಜಾಲತಾಣದಲ್ಲಿ ಕಮೆಂಟ್ ಕೇಳಿ ಬರುತ್ತಿರುವ ಬೆನ್ನಲ್ಲೇ ಸ್ವತಃ ಅದಾ ಶರ್ಮಾ ಮಾತನ್ನಾಡಿದ್ದಾರೆ. ಅವರು ಹೇಳಿದ್ದು ಹೀಗೆ, “ನಾನು ಎಲ್ಲರ ಹೃದಯದಲ್ಲಿ ವಾಸಿಸುತ್ತಿದ್ದೇನೆ. ಮಾತನಾಡಲು ಇದು ಸರಿಯಾದ ಸಮಯ. ನಾನು ಆ ಮನೆ ನೋಡಲು ಹೋದಾಗ ಮಾಧ್ಯಮದ ಗಮನ ಸಂಪೂರ್ಣವಾಗಿ ನನ್ನ ಮೇಲೆ ಇತ್ತು. ನಾನು ಖಾಸಗಿ ವಿಚಾರವನ್ನು ನನ್ನಲ್ಲೇ ಇಟ್ಟುಕೊಳ್ಳಲು ಬಯಸುವ ವ್ಯಕ್ತಿ. ನನ್ನ ಸಿನಿಮಾಗಳಿಗಾಗಿ ಮಾತ್ರ ಸುದ್ದಿಯಲ್ಲಿ ಇರಲು ಬಯಸುತ್ತೇನೆ. ನಾನು ಉಳಿದ ವಿಚಾರಗಳಲ್ಲಿ ಗೌಪ್ಯತೆ ಕಾಪಾಡಿಕೊಳ್ಳಲು ಇಷ್ಟಪಡುತ್ತೇನೆ’ ಎಂದಿದ್ದಾರೆ. ಸುಶಾಂತ್ ಸಿಂಗ್ ಮೃತಪಟ್ಟ ಬಳಿಕ ಅವರ ಬಗ್ಗೆ ಕೆಲವರು ತಪ್ಪಾಗಿ ಮಾತನಾಡಿದ್ದರು.

    ಅವರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎಂದೆಲ್ಲ ಹೇಳಿದ್ದರು. ಈ ವಿಚಾರ ಕೇಳಿ ಅದಾ ಶರ್ಮಾಗೆ ಬೇಸರ ಆಗಿತ್ತಂತೆ. ‘ಈ ಜಗತ್ತಿನಲ್ಲಿ ಇಲ್ಲದ ವ್ಯಕ್ತಿಯ ಬಗ್ಗೆ ಮಾತನಾಡುವುದು ತಪ್ಪು ಎಂದು ನಾನು ಭಾವಿಸಿದೆ. ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಹೀಗಾಗಿ, ನಾನು ಆ ಮನೆ ಖರೀದಿಸಿದೆ. ಅವರ ಬಗ್ಗೆ ಮಾಡಿದ ಕೆಲವು ಕಮೆಂಟ್​ ಗಳನ್ನು ನೋಡಿದೆ. ನನ್ನನ್ನು ಟ್ರೋಲ್ ಮಾಡಿ. ಆದರೆ, ಜಗತ್ತಿನಲ್ಲಿ ಇಲ್ಲದ ಆ ವ್ಯಕ್ತಿ ಬಗ್ಗೆ ಮಾತನಾಡಬೇಡಿ” ಎಂದು ಮನವಿ ಮಾಡಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಕೆ. ಭರತ್ ಕಾಂತ್ (31) ರಸ್ತೆ ಅಪಘಾತದಲ್ಲಿ…

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.