ಉತ್ತರ ಪ್ರದೇಶ: ಮುಸ್ಲಿಂ ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಿತ್ರಹಿಂಸೆ ನೀಡಿ, ಆತನ ಖಾಸಗಿ ಭಾಗಗಳಿಗೆ ಹಾನಿ ಮಾಡಿದ ಘಟನೆ ಬಿಜ್ನೋರ್ ದಲ್ಲಿ ನಡೆದಿದೆ. ಪತಿಯನ್ನು ಬೆತ್ತಲೆ ಮಾಡಿ, ಮಂಚದ ಮೇಲೆ ಮಲಗಿಸಿ, ಕೈ-ಕಾಲುಗಳನ್ನು ಕಟ್ಟಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ನೀಡಿದ್ದಾಳೆ.
ಏಳು ತಿಂಗಳ ಹಿಂದೆ ಇಬ್ಬರ ಕುಟುಂಬ ಒಪ್ಪಿಗೆಯ ನಂತರ ಮುಸ್ಲಿಂ ಪದ್ಧತಿಯಂತೆ ಪ್ರೇಮ ವಿವಾಹ ಆಗಿದ್ದರು ಎನ್ನಲಾಗಿದೆ. ಪತಿಯನ್ನು ಮಂಚಕ್ಕೆ ಕಟ್ಟಿ ಹಾಕಿ, ಮಂಚದಲ್ಲಿ ಅವನ ಜತೆಗೆ ಮಲಗುವುದು, ಸಿಗರೇಟ್ ಸೇದುತ್ತಿದ್ದಳು, ಮದ್ಯಪಾನ ಕೂಡ ಮಾಡುತ್ತಿದ್ದಳು, ಇದರ ಮಧ್ಯೆ ಪತಿಗೆ ಚಿತ್ರಹಿಂಸೆ ಕೂಡ ನೀಡುತ್ತಿದ್ದಳು ಎಂದು ಹೇಳಲಾಗಿದೆ. ಇದರಿಂದ ನೊಂದು ಮಗ ಮಲಗುವ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಸೊಸೆಯ ದುಷ್ಕೃತ್ಯ ಬಯಲಿಗೆಳೆದಿದ್ದಾರೆ ಅತ್ತೆ.
ಆಕೆ ಹಿಂಸೆ ನೀಡಿದ್ದಳು ಎಂಬುದಕ್ಕೆ ಸಿಸಿಟಿವಿ ಕೂಡ ಸಾಕ್ಷಿಯಾಗಿದೆ. ಪತಿ ಹಾಗೂ ಸಿಸಿ ಟಿವಿ ವಿಡಿಯೋ ಆಧಾರದ ಮೇಲೆ ಮಹಿಳೆಯ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಇದೀಗ ಆಕೆ ಮಾಡಿದ ಕೃತ್ಯಕ್ಕೆ ಅವಳನ್ನು ಬಂಧಿಸಲಾಗಿದ್ದು, ಗಂಡನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296