ತಿಪಟೂರು: ತಾನು ಬರೆದ ಪತ್ರಕ್ಕೆ ಸ್ಪಂದಿಸಿ ಸಿಎಂ ಸಿದ್ದರಾಮಯ್ಯನವರು ರಾಜ್ಯ ಸರ್ಕಾರದ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ರಕ್ಷಣಾ ಯೋಜನೆ ಸಹಕಾರ ಇಲಾಖೆಯ ಯಶಸ್ವಿನಿ ಟ್ರಸ್ಟಿಯಾಗಿ ತಾಲೂಕು ಕುಮಾರ ಆಸ್ಪತ್ರೆಯ ವೈದ್ಯ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ.ಶಶಿಧರ್ ತಿಳಿಸಿದರು.
ಯಶಸ್ವಿನಿ ಟ್ರಸ್ಟಿಯನ್ನಾಗಿ ಆರ್ ಎಸ್ ಎಸ್ ಕಾರ್ಯಕರ್ತರನ್ನು ನೇಮಿಸಿ ಆದೇಶ ಹೊರಡಿಸಿದ್ದ ನೇಮಕಕ್ಕೆ ನಮ್ಮ ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಸಹಕಾರ ನೀಡಿದ್ದು. ಇದು ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಉಂಟು ಮಾಡಿತ್ತು.
ಈ ಬಗ್ಗೆ ನಾನು ಬರೆದಿದ್ದ ಪತ್ರಕ್ಕೆ ಸ್ಪಂದಿಸಿದ ಸಿಎಂ ಆದೇಶ ಹಿಂಪಡೆದುಕಾಂಗ್ರೆಸ್ ಕಾರ್ಯಕರ್ತರಲ್ಲಿ ನೈತಿಕ ಬಲ ಹೆಚ್ಚಿಸಿದೆ ಮತ್ತು ಆರ್ ಎಸ್ ಎಸ್ ಅಲ್ಲದೆ ಯಾವುದೇ ವ್ಯಕ್ತಿಯನ್ನು ಟ್ರಸ್ಟಿಯನ್ನಾಗಿ ಮಾಡಿದರೆ ನಮಗೆ ಯಾವುದೇ ತಕರಾರಿಲ್ಲ ಎಂದು ಸಿ.ಬಿ.ಶಶಿಧರ್ ತಿಳಿಸಿದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



