ವಿಜಯನಗರ: ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನರೇಗಾ ಕಾಮಗಾರಿ ವಿರೋಧಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಲಾಗಿದ್ದು, ಇದರಿಂದ ಮನನೊಂದ ಮಹಿಳೆಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೀದ್ಗಿ ಮೈಲವ್ವ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಪುತ್ರನು ಗ್ರಾಮ ಪಂಚಾಯಿತಿ ಪಿಡಿಒ ಸೇರಿ ಎಂಟು ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆಯ ದೂರು ದಾಖಲಿಸಿದ್ದಾನೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ಮೋರಿಗೇರಿ ಗ್ರಾಮದಲ್ಲಿ ದೀದ್ಗಿ ಮೈಲವ್ವ ಅವರು ಐದು ಎಕರೆ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿದ್ದು, ಕಳೆದ 15-20 ವರ್ಷದಿಂದ ಅವರು ಸಾಗುವಳಿ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಪಂಚಾಯಿತಿಯಿಂದ ನರೇಗಾ ಕಾಮಗಾರಿ ಕೈಗೊಳ್ಳಲಾಗಿದ್ದು, ದೀದ್ಗಿ ಮೈಲವ್ವ ಅವರು ಸಾಗುವಳಿ ಮಾಡಿದ ಜಮೀನಿನಲ್ಲಿ ಗೋಕಟ್ಟೆ ನಿರ್ಮಿಸಲು ಏಪ್ರಿಲ್ 5ರಂದು ಕಾಮಗಾರಿ ಆರಂಭಿಸಿದ್ದನ್ನು ಇವರು ವಿರೋಧಿಸಿದ್ದರು. ಆದರೂ, ಕಾಮಗಾರಿ ಮುಂದುವರಿಸಿದ ಕಾರಣ ನೊಂದ ಮಹಿಳೆಯು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296