ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ, ಅಪ್ರಾಪ್ತ ಮಗಳ ಪರವಾಗಿ ದೂರು ನೀಡಿದ್ದ ದೂರುದಾರ ಮಹಿಳೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
ದೂರುದಾರ ಮಹಿಳೆಯು ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅಲ್ಲದೆ, ಅವರು ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಯಡಿಯೂರಪ್ಪ ವಿರುದ್ಧ ಇತ್ತೀಚೆಗೆ ಅಪ್ರಾಪ್ತ ಬಾಲಕಿಯ ತಾಯಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದರು. “ನನ್ನ ಮಗಳ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್ ಐಟಿ ಗೆ ವಹಿಸುವಂತೆ ಆಗ್ರಹಿಸಿ, ಫೆಬ್ರವರಿ 2 ರಂದು ಯಡಿಯೂರಪ್ಪ ಅವರ ಬಳಿ ನಾನು ಮತ್ತು ಮಗಳು ತೆರಳಿದ್ದ ವೇಳೆ, ಲೈಂಗಿಕ ದೌರ್ಜನ್ಯದ ಘಟನೆ ನಡೆದ ಬಗ್ಗೆ ಅಪ್ರಾಪ್ತೆ ಮಗಳ ತಾಯಿ ಹೇಳಿಕೊಂಡಿದ್ದರು. ಈಗ ಅವರು ಕೊನೆಯುಸಿರೆಳೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


