ಮಂಡ್ಯ: ಯುವಕನ ಮೃತದೇಹವು ಕೈ ಹಾಗೂ ಕತ್ತುಕೊಯ್ದು ಕೊಂಡು ನೇಣು ಬಿಗಿದಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ಘಟನೆ ನಡೆದಿದೆ. ವಿನಯ್ ಕುಮಾರ್ (24) ಮೃತ ದುರ್ದೈವಿ.
ಆತ್ಮಹತ್ಯೆಗೂ ಮುನ್ನ ಮೊಬೈಲ್ ಸಿಮ್ ತೆಗೆದು ಬಿಸಾಡಿದ್ದಾನೆ. ಮೊಬೈಲ್ ಪೂರ್ತಿ ರೀಸ್ಟಾರ್ಟ್ ಮಾಡಿದ್ದಾನೆ. ಯಾವುದೋ ಬಲವಾದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೆ.
ಸದ್ಯ ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಜತೆಗೆ ಯುವಕನ ಮೊಬೈಲ್ ವಶಕ್ಕೆ ಪಡೆದು ತನಿಖೆಯನ್ನು ಮುಂದುವರಿಸಿದ್ದಾರೆ.


